ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಉಸ್ತಾದ್ ಗುಲಾಂ ಮುಸ್ತಾಫಾಖಾನ್ ವಿಧಿವಶ
Team Udayavani, Jan 17, 2021, 8:32 PM IST
ಮುಂಬೈ: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಹಿಂದೂಸ್ತಾನಿ ಗಾಯಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಉಸ್ತಾದ್ ಗುಲಾಂ ಮುಸ್ತಫಾಖಾನ್ (89) ಇಂದು ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
1931 ರಲ್ಲಿ ಉತ್ತರಪ್ರದೇಶದ ಬದಾಯುನಲ್ಲಿ ಉಸ್ತಾದ್ ಗುಲಾಂ ಮುಸ್ತಫಾಖಾನ್ ಜನಿಸಿದ್ದರು. ತಂದೆ ಉಸ್ತಾದ್ ವಾರಿನ್ ಹುಸೇನ್ ಖಾನ್ ಹಾಗೂ ತಾಯಿ ಸಬ್ರಿ ಬೇಗಂ ಕೂಡ ಸಂಗೀತಗಾರರಾಗಿದ್ದರು. ಮುಸ್ತಫಾಖಾನ್ ಹಿಂದೂಸ್ಥಾನಿ ಸಂಗೀತದಲ್ಲಿ ಪ್ರಾಥಮಿಕ ಶಿಕ್ಷಣವನ್ನು ತಂದೆಯವರಲ್ಲಿ ಕಲಿತರು.
ಮುಸ್ತಫಾಖಾನ್ ಅವರು ಸಂಗೀತ ಕ್ಷೇತ್ರದಲ್ಲಿ ಮಾಡಿದ ಮಹತ್ತರ ಸಾಧನೆಗಾಗಿ 1991ರಲ್ಲಿ ಪದ್ಮಶ್ರೀ ನೀಡಿ ಗೌರವಿಸಲಾಗಿತ್ತು. ಹಾಗೆಯೇ 2006ರಲ್ಲಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಕೂಡ ಒಲಿದು ಬಂತು. 2018ರಲ್ಲಿ ಪದ್ಮವಿಭೂಷಣ ನೀಡಿ ಗೌರವಿಸಲಾಯಿತು.
ಇದನ್ನೂ ಓದಿ: ವಿದೇಶದಲ್ಲಿ ಬಸವಣ್ಣನಿಂದ ಗೌರವ, ಕಾಲ್ಪನಿಕ ರಾಮನಿಂದಲ್ಲ: ಶ್ರೀ ನಿಜಗುಣಾನಂದ ಸ್ವಾಮೀಜಿ
ಉಸ್ತಾದ್ ಗುಲಾಂ ಮುಸ್ತಫಾಖಾನ್ ಅವರ ನಿಧನಕ್ಕೆ ಖ್ಯಾತ ಗಾಯಕಿ ಲತಾ ಮಂಗೇಶ್ವರ್, ಪ್ರಧಾನಿ ಮೋದಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಉಸ್ತಾದ್ ಗುಲಾಂ ಮುಸ್ತಫಾಖಾನ್ ಅವರ ನಿಧನವು ನಮ್ಮ ಸಾಂಸ್ಕೃತಿಕ ಜಗತ್ತನ್ನು ಬಡವಾಗಿಸಿದೆ. ಸಂಗೀತ ಕ್ಷೇತ್ರದಲ್ಲಿದ್ದ ಅವರ ಸೃಜನಶೀಲತೆಯ ಹಲವು ತಲೆಮಾರುಗಳನ್ನು ಮಂತ್ರಮುಗ್ಧರನ್ನಾಗಿಸಿತ್ತು. ಅವರೊಂದಿಗೆ ನಡೆಸಿದ ಸಂವಹನ ಇನ್ನೂ ಕೂಡ ನನ್ನ ನೆನಪಿನಲ್ಲಿವೆ. ಅವರ ಅಗಲಿಕೆಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
The passing away of Ustad Ghulam Mustafa Khan Sahab leaves our cultural world poorer. He was a doyen of music, a stalwart of creativity whose works endeared him to people across generations. I have fond memories of interacting with him. Condolences to his family and admirers. pic.twitter.com/jZy7eVhW68
— Narendra Modi (@narendramodi) January 17, 2021
ಇದನ್ನೂ ಓದಿ: ಬೆಳಗಾವಿ : ಬಿಜೆಪಿ ಚಾಣಕ್ಯ ಅಮಿತ್ ಶಾಗೆ ಬೆಳ್ಳಿ ಗದೆ ನೀಡಿ, ರುದ್ರಾಕ್ಷಿ ಹಾರ ಹಾಕಿ ಸ್ವಾಗತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.