ಕೃಷಿ ಕಾಯ್ದೆ ವಿವಾದ: ಕೇಂದ್ರದ ಜತೆ ಮುಂದುವರಿದ ರೈತರ ಮಾತುಕತೆ,4 ಪ್ರಮುಖ ರಸ್ತೆ ಬಂದ್
ಎಕ್ಸ್ ಪ್ರೆಸ್ ವೇಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಪರಿಣಾಮ ಭಾರೀ ಪ್ರಮಾಣದ ಟ್ರಾಫಿಕ್ ಜಾಮ್
Team Udayavani, Dec 3, 2020, 12:14 PM IST
ನವದೆಹಲಿ: ಕೇಂದ್ರದ ನೂತನ ಕೃಷಿ ನೀತಿಯನ್ನು ರದ್ದುಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಯ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವೆ ನಾಲ್ಕನೇ ಸುತ್ತಿನ ಮಾತುಕತೆ ಗುರುವಾರ(ಡಿಸೆಂಬರ್ 03, 2020) ನಡೆಯಲಿದ್ದು, ಈ ಸಂದರ್ಭದಲ್ಲಿ ವಿವಿಧ ಪ್ರದೇಶಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿರುವುದಾಗಿ ವರದಿ ತಿಳಿಸಿದೆ.
ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ರೈತರು ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಪರಿಣಾಮ ಭಾರೀ ಪ್ರಮಾಣದ ಟ್ರಾಫಿಕ್ ಜಾಮ್ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
ಇಂದು ವಿಜ್ಞಾನ ಭವನದಲ್ಲಿ ಪಂಜಾಬ್, ಹರ್ಯಾಣ ರೈತ ಪ್ರತಿನಿಧಿಗಳು ಮತ್ತು ಕೇಂದ್ರ ಸರ್ಕಾರದ ಜತೆ ಮಹತ್ವದ ಮಾತುಕತೆ ನಡೆಯಲಿದೆ. ರೈತ ಸಂಘಟನೆಯ ಸುಮಾರು 35 ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ನೂತನ ಕೃಷಿ ಕಾಯ್ದೆಗೆ ಸಂಬಂಧಿಸಿದಂತೆ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ರೈಲ್ವೆ ಖಾತೆ ಸಚಿವ ಪಿಯೂಶ್ ಗೋಯಲ್ ಜತೆ ಬುಧವಾರ(ಡಿ.2, 2020) ಮಾತುಕತೆ ನಡೆಸಿದ್ದರು.
ನೂತನ ಕೃಷಿ ಕಾಯ್ದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ದೆಹಲಿ ಚಲೋ ನಡೆಸುತ್ತಿರುವ ಪಂಜಾಬ್, ಹರ್ಯಾಣ ರೈತರು ದೆಹಲಿಯ ಗಡಿ ಪ್ರದೇಶವಾದ ಸಿಂಘು, ನೋಯ್ಡಾ, ಗಾಝಿಪುರ್ ಮತ್ತು ಟಿಖ್ರಿಯಲ್ಲಿ ಜಮಾಯಿಸುವ ಮೂಲಕ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
ಈಗಾಗಲೇ ರೈತ ಮುಖಂಡರು ಕಾಯ್ದೆಗೆ ಸಂಬಂಧಿಸಿದಂತೆ ವಿವರವಾದ ಬೇಡಿಕೆಯ ಪಟ್ಟಿಯನ್ನು ಕಳುಹಿಸಿಕೊಟ್ಟಿದ್ದು, ಈ ನಿಟ್ಟಿನಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅಮಿತ್ ಶಾ ಜತೆ ಚರ್ಚೆ ನಡೆಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.