ರೈತರ ಹೆಚ್ಚಿನ ಬೇಡಿಕೆಗೆ ಕೇಂದ್ರ ಅಸ್ತು : ಶೀಘ್ರ ಆಂದೋಲನ ಅಂತ್ಯ
Team Udayavani, Oct 2, 2018, 3:26 PM IST
ಹೊಸದಿಲ್ಲಿ : ಕೇಂದ್ರ ಸರಕಾರ ಭಾರತೀಯ ಕಿಸಾನ್ ಸಂಘ (ಬಿಕೆಯು) ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿ ಅವರ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ರೈತರ ಆಂದೋಲನ ಬೇಗನೆ ಮುಗಿಯಲಿದೆ ಎಂಬ ಸೂಚನೆಗಳು ದೊರಕಿವೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬಿಕೆಯು ಉನ್ನತ ನಾಯಕರೊಂದಿಗೆ ಇಂದು ಮಾತುಕತೆ ನಡೆಸಿ ರೈತರ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಕೇಂದ್ರ ಸಹಾಯಕ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.
“ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬಿಕೆಯು ಉನ್ನತ ನಾಯಕರೊಂದಿಗೆ ಮಾತುಕತೆ ನಡೆಸಿ ಅವರ ಹಲವು ಬಹು ಮುಖ್ಯ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿರುವ ಕಾರಣ ರೈತರ ನಾಯಕರು, ಯುಪಿ ಸಚಿವರಾದ ಲಕ್ಷ್ಮೀ ನಾರಾಯಣ ಜೀ, ಸುರೇಶ್ ರಾಣಾ ಜಿ ಮತ್ತು ನಾನು ಈಗಿನ್ನು ರೈತರನ್ನು ಭೇಟಿಯಾಗಲು ಹೋಗುತ್ತಿದ್ದೇವೆ’ ಎಂದು ಕೇಂದ್ರ ಸಹಾಯಕ ಕೃಷಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ಇಂದು ಬೆಳಗ್ಗೆ ಕಿಸಾನ್ ಕ್ರಾಂತಿ ಪಾದಯಾತ್ರೆ ದಿಲ್ಲಿ-ಯುಪಿ ಗಡಿಯನ್ನು ತಲುಪಿದಾಗ ಅದನ್ನು ಪೊಲೀಸರು ಬಲವಂತದಿಂದ ತಡೆದ ಸಂದರ್ಭದಲ್ಲಿ ನಡೆದ ಸಂಘರ್ಷ ಏರ್ಪಟ್ಟಿತ್ತು. ಪೊಲೀಸರು ಪ್ರತಿಭಟನೆ ನಿರತ ರೈತರನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ್ದರು. ಆಗ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಂದೋಲನ ನಿರತ ರೈತರಿಗೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.