ಬರಗಾಲಕ್ಕಿಂತ ಪ್ರವಾಹದ ವೇಳೆಯೇ ರೈತರ ಆತ್ಮಹತ್ಯೆ ಜಾಸ್ತಿ!
Team Udayavani, Sep 12, 2020, 1:20 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ನೀರಿನ ಲಭ್ಯತೆ ಕಡಿಮೆಯಿರುವ ಕಾಲಕ್ಕಿಂತ, ಅತಿಯಾದ ಮಳೆ ಅಥವಾ ಪ್ರವಾಹದ ಸಂದರ್ಭದಲ್ಲೇ ರೈತರ ಆತ್ಮಹತ್ಯೆ ಪ್ರಮಾಣ ಜಾಸ್ತಿ! ಹೀಗೊಂದು ಅಧ್ಯಯನ ವರದಿ ಯನ್ನು ಅಂತಾರಾಷ್ಟ್ರೀಯ ಅಧ್ಯಯನ ತಂಡವೊಂದು ನೀಡಿದೆ. ಬೇರೆ ಬೇರೆ ಗ್ರಾಮೀಣ ಭಾಗಗಳು ಸೇರಿ ಒಟ್ಟಾರೆ 85 ಲಕ್ಷ ಮಂದಿ ವಾಸವಿರುವ ಜಾಗಗಳಲ್ಲಿ, 2001ರಿಂದ 2013ರವರೆಗೆ ಸಂಭವಿಸಿದ ಸಾವಿಗೆ ಕಾರಣ ಪರಿಶೀಲಿಸಿ, ಈ ನಿರ್ಧಾರಕ್ಕೆ ಬರಲಾಗಿದೆ.
5000ಕ್ಕಿಂತ ಕಡಿಮೆ ಮಂದಿ ವಾಸಿಸುವ ಪ್ರದೇಶಗಳನ್ನು ಯಾದೃಚ್ಛಿಕವಾಗಿ (ರ್‍ಯಾಂಡಮ್) ಅಧ್ಯಯನಕ್ಕೆ ಆಯ್ದುಕೊಳ್ಳಲಾಗಿದೆ. ಅಲ್ಲಿ ಶೇ.25ಕ್ಕಿಂತ ಹೆಚ್ಚು ಪುರುಷರು ಕೃಷಿಯಲ್ಲಿ ನಿರತವಾಗಿದ್ದಾರೆಯೇ ಎಂದು ಗಮನಿಸಲಾಗಿದೆ. ಇಲ್ಲಿ ನಡೆದ 9456 ಆತ್ಮಹತ್ಯೆ ಪ್ರಕರಣಗಳನ್ನು ವಿವರವಾಗಿ ಪರಿಶೀಲಿಸಲಾಗಿದೆ. ಮಾಮೂಲಿ ಸಂದರ್ಭಗಳಿಗೆ ಹೋಲಿಸಿದರೆ ಪ್ರವಾಹ ಬಂದ ಕಾಲದಲ್ಲಿ ಆತ್ಮಹತ್ಯೆ ಪ್ರಕರಣಗಳು ಶೇ.18.7ರಷ್ಟು ಏರಿವೆ. ಬರಗಾಲದ ಸಂದರ್ಭದಲ್ಲಿ ಮರಣ ಪ್ರಮಾಣ ಶೇ.3.6ರಷ್ಟು ಮಾತ್ರ ಎಂದು ಕಂಡುಬಂದಿದೆ. ಇಲ್ಲೆಲ್ಲ ಮಾಮೂಲಿಯಾಗಿ ವಿಷ ಸೇವಿಸಿ (ಶೇ.40), ನೇಣುಬಿಗಿದುಕೊಂಡು (ಶೇ.37), ಬೆಂಕಿಹಚ್ಚಿಕೊಂಡು (ಶೇ.10) ಸಾವನ್ನಪ್ಪಿದ ಪ್ರಕರಣಗಳು ಪತ್ತೆಯಾಗಿವೆ. ಈ ಅಧ್ಯಯನದ ನೇತೃತ್ವವನ್ನು ಅಮೆರಿಕದ ಕೊಲಂಬಿಯ ವಿಶ್ವವಿದ್ಯಾಲಯದ ಎಪಿಡೆಮಿಯಾಲಜಿ ವಿಭಾಗ ವಹಿಸಿತ್ತು. ಭಾರತದ ಗಾಂಧಿನಗರದ ಐಐಟಿ, ಕೆನಡಾದ ಮೆಕ್‌ಗಿಲ್ ವಿಶ್ವವಿದ್ಯಾಲಯ ಭಾಗವಹಿಸಿದ್ದವು. ಎಂಡಿಎಸ್ (ಮಿಲಿಯನ್ ಡೆತ್ಸ್ ಸ್ಟಡಿ) ನೀಡಿದ ಮಾಹಿತಿಯನ್ನು ಬಳಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.