Farmers Protest; ಕೇಂದ್ರದ ಆಫ‌ರ್‌ ತಿರಸ್ಕರಿಸಿದ ರೈತರು: ಧರಣಿ ಮುಂದುವರಿಕೆ

ಎಲ್ಲ 23 ಬೆಳೆಗಳನ್ನು ಎಂಎಸ್‌ಪಿ ಅಡಿ ತರುವಂತೆ ಎಸ್‌ಕೆಎಂ ಆಗ್ರಹ

Team Udayavani, Feb 20, 2024, 6:20 AM IST

1-wqewewewq

ಹೊಸದಿಲ್ಲಿ: 2ನೇ ವಾರಕ್ಕೆ ಕಾಲಿಟ್ಟಿರುವ ಸರಕಾರ ಮತ್ತು ರೈತರ ನಡುವಿನ ಬಿಕ್ಕಟ್ಟು ಸದ್ಯಕ್ಕೆ ಕೊನೆಗಾಣುವ ಲಕ್ಷಣ ಕಾಣುತ್ತಿಲ್ಲ. ಮೂರು ವಿಧದ ಬೇಳೆ ಕಾಳುಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಅಡಿಯಲ್ಲಿ 5 ವರ್ಷಗಳವರೆಗೆ ಗುತ್ತಿಗೆ ಆಧಾರದಲ್ಲಿ ಖರೀದಿಸುವ ಪ್ರಸ್ತಾವವನ್ನು ಕೇಂದ್ರ ಸರಕಾರಮುಂದಿಟ್ಟಿತ್ತಾದರೂ, ರೈತರು ಈ ಆಫ‌ರನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ರೈತರ ಪ್ರತಿಭಟನೆ ಮುಂದುವರಿದಿದೆ.

ರವಿವಾರ ರಾತ್ರಿ ನಡೆದ 4ನೇ ಸುತ್ತಿನ ಮತುಕತೆ ಬಳಿಕ, ದ್ವಿದಳ ಧಾನ್ಯಗಳು, ಮೆಕ್ಕೆ ಜೋಳ, ಹತ್ತಿಯನ್ನು ಎಂಎಸ್‌ಪಿ ಅಡಿಯಲ್ಲಿ 5 ವರ್ಷಗಳವರೆಗೆ ಖರೀದಿಸುವ ಪ್ರಸ್ತಾವವನ್ನು ಸರಕಾರರೈತರ ಮುಂದಿಟ್ಟಿತ್ತು. ಅದನ್ನು ನಿರಾಕರಿಸಿರುವ ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ಕೆಎಂ), ಎಲ್ಲ 23 ಬೆಳೆಗಳನ್ನು ಎಂಎಸ್‌ಪಿ ಅಡಿ ತರುವಂತೆ ಒತ್ತಾಯಿಸಿದೆ.

ಸರಕಾರದ ಪ್ರಸ್ತಾವವು ರೈತರ ಬೇಡಿಯನ್ನು ದಿಕ್ಕುತಪ್ಪಿಸುತ್ತಿದೆ. 2014ರ ಸಾರ್ವತ್ರಿಕ ಚುನಾವಣೆಯ ವೇಳೆ ಬಿಜೆಪಿ ನೀಡಿದ್ದ ಆಶ್ವಾಸನೆಯಂತೆ ಎಲ್ಲ 23 ಬೆಳೆಗಳನ್ನು ಎಂಎಸ್‌ಪಿ ಅಡಿ ತರಬೇಕು. ಇದಲ್ಲದೆ ಕನಿಷ್ಠ ಬೆಂಬಲ ಬೆಲೆಯು ಸ್ವಾಮಿನಾಥನ್‌ ಆಯೋಗದ ಶಿಫಾರಸಿನಂತೆ ಇ2+50 ಸೂತ್ರದಲ್ಲಿ ಇರಬೇಕೇ ಹೊರತು, ಈಗಿನಂತೆ ಅ2+ಊಔ+50 ಸೂತ್ರದಲ್ಲಿ ಇರಬಾರದು ಎಂದು ಮೋರ್ಚಾ ಪಟ್ಟುಹಿಡಿದಿದೆ.

ಜತೆಗೆ, ಕೃಷಿ ಸಚಿವ ಅರ್ಜುನ್‌ ಮುಂಡಾ ಸೇರಿ 3 ಸಚಿವರನ್ನು ಒಳಗೊಂಡ ಕೇಂದ್ರದ ಸಮಿತಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಎಸ್‌ಕೆಎಂ, 4 ಸುತ್ತಿನ ಮಾತುಕತೆ ಬಳಿಕವೂ ಸಮಿತಿಯಲ್ಲಿ ಪಾರದರ್ಶಕತೆಯ ಕೊರತೆಯಿತ್ತು ಎಂದು ಟೀಕಿಸಿದೆ.

ಇದಲ್ಲದೆ, ಸಮರ್ಗ ಸಾರ್ವಜನಿಕ ವಲಯದ ಬೆಳೆ ವಿಮಾ ಯೋಜನೆ, 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 10 ಸಾವಿರ ಪಿಂಚಣಿ ಮುಂತಾದ ಬೇಡಿಕೆಗಳು ಯಾವುದೇ ಪ್ರಗತಿ ಸಾಧಿಸಿಲ್ಲ. ಲಖೀಂಪುರ ಖೇರಿಯಲ್ಲಿ ರೈತರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಅಜಯ್‌ ಮಿಶ್ರಾ ತೇನಿ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎನ್ನುವ ನಮ್ಮ ಬೇಡಿಕೆಯೂ ಈಡೇರಿಲ್ಲ ಎಂದು ಕಿಸಾನ್‌ ಮೋರ್ಚಾ ದೂರಿದೆ.

ರೈತರ ಬೇಡಿಕೆಯಲ್ಲೇನಿತ್ತು ?

(ಎನ್‌ಸಿಸಿಎಫ್), ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ಎನ್‌ಎಎಫ್ಇಡಿ)ದಂತಹ ಒಕ್ಕೂಟ ಸಹಕಾರ ಸಂಘಗಳು 5 ವರ್ಷಗಳ ಗುತ್ತಿಗೆಯಲ್ಲಿ ತೊಗರಿಬೇಳೆ ಮತ್ತು ಮೆಕ್ಕೆಜೋಳವನ್ನು ಖರೀದಿಸುವ ಒಪ್ಪಂದಕ್ಕೆ ಸಹಿ ಹಾಕುವುದು. ಇದೇ ಒಪ್ಪಂದದಲ್ಲಿ ಎಲ್ಲÉ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ತರಲು ಪ್ರಸ್ತಾವನೆ. ಎಂಎಸ್‌ಪಿಯಡಿ ಖರೀದಿಸು ವಾಗ ಖರೀದಿ ಪ್ರಮಾಣದ ಮೇಲೆ ಯಾವುದೇ ಮಿತಿ ಹೇರದಿರುವುದು. ಇದಕ್ಕೆ ಸಂಬಂಧಿಸಿ ಒಂದು ವೆಬ್‌ಸೈಟ್‌ ಸ್ಥಾಪಿಸುವುದು.

ಪ್ರಸ್ತುತ ಎಂಎಸ್‌ಪಿ ಯೋಜನೆಯಲ್ಲೇನಿದೆ?

ಭತ್ತ, ಗೋಧಿ, ಬೇಳೆ ಕಾಳುಗಳು ಮತ್ತು ಮೆಕ್ಕೆ ಜೋಳದಂತಹ ಪ್ರಧಾನ ಆಹಾರಗಳನ್ನು  ಹೊರತುಪಡಿಸಿ, ಉಳಿದ 23 ಬೆಳೆಗಳಿಗೆ ಎಂಎಸ್‌ಪಿ ನೀಡಲಾಗುತ್ತಿದೆ. ಇದರಲ್ಲಿ ರಾಗಿ, ನೆಲಗಡಲೆ, ಸೂರ್ಯಕಾಂತಿ ಬೀಜಗಳು, ಬಾರ್ಲಿ, ಸಾಸಿವೆ ಮೊದಲಾದವು ಸೇರಿವೆ.

ಟಾಪ್ ನ್ಯೂಸ್

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.