ರೈತರ ಪ್ರತಿಭಟನೆ: ದೆಹಲಿಯ ಸಿಂಘು, ಟಿಕ್ರಿ ಗಡಿ ಪ್ರದೇಶಗಳಲ್ಲಿ ಮತ್ತೆ ಇಂಟರ್ನೆಟ್ ಸ್ಥಗಿತ
Team Udayavani, Feb 6, 2021, 6:22 PM IST
ನವದೆಹಲಿ: ಸಿಂಘು, ಘಾಜಿಫುರ್, ಟಿಕ್ರಿ, ಗಡಿಪ್ರದೇಶಗಳಲ್ಲಿ ಮತ್ತೆ ತಾತ್ಕಾಲಿಕವಾಗಿ ಇಂಟರ್ನೆಟ್ ಸ್ಥಗಿತಗೊಳಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.
ರೈತರ ‘ಚಕ್ಕಾ ಜಾಮ್’ ಪ್ರತಿಭಟನೆ ಹಿನ್ನಲೆಯಲ್ಲಿ ದೆಹಲಿ ಗಡಿ ಪ್ರದೇಶಗಳಲ್ಲಿ ಇಂದು (ಫೆ. 6 ) ಸಂಜೆಯಿಂದ 24 ಗಂಟೆಗಳವರೆಗೂ ಇಂಟರ್ನೆಟ್ ಬಂದ್ ಮಾಡಲಾಗಿದೆ.
ಸಾರ್ವಜನಿಕ ಹಿತಾಸಕ್ತಿ ಕಾಯ್ದೆಯಡಿಯಲ್ಲಿ ತಾತ್ಕಾಲಿಕವಾಗಿ ಟೆಲಿಕಾಂ ಸರ್ವಿಸ್ ಗಳನ್ನು ಬಂದ್ ಮಾಡಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
ಇದಕ್ಕೂ ಮೊದಲು ಜನವರಿ 29 ರಿಂದ ಫೆ. 2 ರವರೆಗೂ ಸಿಂಘು, ಘಾಜಿಫುರ್, ಟಿಕ್ರಿ ಮತ್ತು ಇತರ ಗಡಿ ಪ್ರದೇಶಗಳಲ್ಲಿ ಇಂಟರ್ ನೆಟ್ ಸ್ಥಗಿತಗೊಳಿಸಲಾಗಿತ್ತು.
ಇದನ್ನೂ ಓದಿ: ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಇಂದು ರೈತರು ದೇಶಾದ್ಯಂತ ಚಕ್ಕಾ ಜಾಮ್ ಪ್ರತಿಭಟನೆಗೆ ಕರೆ ನೀಡಿದ್ದು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ ಕಾಲ ಬಂದ್ ಮಾಡಲು ನಿರ್ಧರಿಸಿದ್ದರು. ದೆಹಲಿ, ಉತ್ತರಪ್ರದೇಶ್, ಉತ್ತರಖಾಂಡ್ ಹೊರತುಪಡಿಸಿ ಉಳಿದೆಲ್ಲಾ ರಾಜ್ಯಗಳಲ್ಲಿ ಹೆದ್ದಾರಿಗಳನ್ನು ಬಂದ್ ಮಾಡಲಾಗಿತ್ತು ಎಂದು ವರದಿಯಾಗಿದೆ.
ಏತನ್ಮಧ್ಯೆ ರೈತರ ಹೋರಾಟದ ಹಿಂದೆ ಅಂತರಾಷ್ಟ್ರೀಯ ಪಿತೂರಿ ಎಂಬ ಆರೋಪವನ್ನು ರೈತ ನಾಯಕ ರಾಕೇಶ್ ಟಿಕಾಯತ್ ಅಲ್ಲಗಳೆದಿದ್ದು, ಯಾವ ಅಂತರಾಷ್ಟ್ರೀಯ ಪಿತೂರಿ ? ಯಾವ ಮಾನಹಾನಿ ? ರೈತರು ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆ ಕೇಳುತ್ತಿದ್ದಾರೆ. ಬೆಂಬಲ ಬೆಲೆ ಪ್ರಕ್ರಿಯೇ ಇಲ್ಲದಿರುವುದು ಅತೀ ದೊಡ್ಡ ಪಿತೂರಿ ಎಂದು ಕೇಂದ್ರ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ.
ಇದನ್ನೂ ಓದಿ: ಕೊಲೆಗೆ ಕಾರಣವಾಯ್ತು 20 ರೂ. ಇಡ್ಲಿ: ತಳ್ಳುಗಾಡಿ ವ್ಯಾಪಾರಿಯ ಕೊಲೆಗೈದ ಮೂವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ
Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ
Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.