ರೈತರು ಕೃಷಿ ಕಾನೂನುಗಳನ್ನು ಮುರಿಯುತ್ತಾರೆ : ಶರದ್ ಪವಾರ್

ರೈತರನ್ನು ಪಂಜಾಬ್ ಮೂಲದವರು ಎಂದು ಉಲ್ಲೇಖಿಸಲಾಗಿದೆ. ಹಾಗಾದರೇ “ಪಂಜಾಬ್ ಅಂದರೇ, ಪಾಕಿಸ್ತಾನವೇ?"

Team Udayavani, Jan 25, 2021, 7:26 PM IST

Farmers will ‘destroy’ new agri laws: NCP president Sharad Pawar warns Centre

ಮುಂಬಯಿ : ರೈತರ ಟ್ರ್ಯಾಕ್ಟರ್ ರ್ಯಾಲಿಗೆ ಕ್ಷಣಗಣನೆ ಇರುವಾಗ “ರೈತರು ಹೊಸ ಕೃಷಿ ಕಾನೂನನ್ನು ಮುರಿದು ಹಾಕುತ್ತಾರೆ” ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿ ಪಿ) ಅಧ್ಯಕ್ಷ ಶರದ್ ಪವಾರ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಗೆ ನೀಡಿದ್ದಾರೆ.

ಮುಂಬೈನ ಆಜಾದ್ ಮೈದಾನದಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಬಳಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಒಗ್ಗಟ್ಟನ್ನು ತೋರಿಸುವುದಕ್ಕಾಗಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಶರದ್ ಪವಾರ್ ಕಿಡಿ ಕಾರಿದ್ದಾರೆ.

ಓದಿ: ರೈತರ ಹೋರಾಟದಲ್ಲಿ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಲು ಪ್ರಯತ್ನಿಸುತ್ತಿವೆ : HDK

ಆಡಳಿತ ಪಕ್ಷ ಸಂವಿಧಾನವನ್ನು ದುರ್ಬಲಗೊಳಿಸುವ ಹಿನ್ನೆಲೆಯಲ್ಲಿ ಯಾವುದೇ ಕಾನೂನನ್ನು ಅಂಗೀಕರಿಸಬಹುದು. ಜನ ಸಾಮಾನ್ಯರು, ರೈತರು ಸರ್ಕಾರ ವಿರುದ್ಧ ತಿರುಗಿ ಬಿದ್ದರೇ, ಸರ್ಕಾರವನ್ನೇ ಉರುಳಿಸಬಲ್ಲರು ಎಂದು ಅವರು ಹೇಳಿದ್ದಾರೆ.

“ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನದ ರೈತರು ದೆಹಲಿ ಬಳಿ ಪ್ರತಿಭಟನೆ ನಡೆಸಲಾರಂಭಿಸಿ 60 ದಿನಗಳು ಕಳೆದಿವೆ. ಕಳೆದ ಎರಡು ತಿಂಗಳಿನಿಂದ ದೆಹಲಿ ಗಡಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ  ರೈತರ ಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ವಿಚಾರಿಸಲಿಲ್ಲ. ರೈತರನ್ನು ಪಂಜಾಬ್ ಮೂಲದವರು ಎಂದು ಉಲ್ಲೇಖಿಸಲಾಗಿದೆ. ಹಾಗಾದರೇ “ಪಂಜಾಬ್ ಅಂದರೇ, ಪಾಕಿಸ್ತಾನವೇ?” ಎಂದು  ಪವಾರ್ ಪ್ರಶ್ನಿಸಿದ್ದಾರೆ.

ಓದಿ: ಸರ್ಕಾರದಿಂದ ರೈತರಿಗೆ ಅನ್ಯಾಯ

ಮಸೂದೆಗಳ ಬಗ್ಗೆ ಚರ್ಚಿಸಲು ವಿರೋಧ ಪಕ್ಷಗಳು ಒತ್ತಾಯಿಸಿದರೂ ಕೃಷಿ ಕಾನೂನುಗಳನ್ನು ಸಂಸತ್ತಿನಲ್ಲಿ ವಿವರವಾದ ಚರ್ಚೆಯಿಲ್ಲದೆ ಅಂಗೀಕರಿಸಲಾಗಿದೆ. “ಮಸೂದೆಗಳನ್ನು ಆಯ್ಕೆ ಸಮಿತಿಯ ಮೂಲಕ ಚರ್ಚಿಸಬಹುದಿತ್ತು, ಆದರೆ ಅದು ಕೂಡ ಆಗಲಿಲ್ಲ” ಕೃಷಿ ಕಾನೂನುಗಳ ವಿರುದ್ಧ ರಾಜ್ಯದ ರೈತರು ಮೆಮೊರೆಂಡಮ್ ಸಲ್ಲಿಸಬೇಕಾದ ಸಮಯದಲ್ಲಿ  ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಗೋವಾಕ್ಕೆ ತೆರಳಿರುವುದನ್ನು ಉಲ್ಲೇಖಿಸಿ, ಕೋಶ್ಯರಿ ಅವರಿಗೆ ರೈತರಿಗೆ ಸಮಯ ಕೊಡಲು ಆಗುವುದಿಲ್ಲ. ಆದರೆ, ಬಾಲಿವುಡ್ ನಟಿ ಕಂಗನಾ ರನೌತ್ ಅವರನ್ನು ಭೇಟಿ ಮಾಡಲು ಸಮಯವಿದೆ ಎಂದು ಕೋಶ್ಯರಿ ವಿರುದ್ಧ ಪವಾರ್  ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ, ಮಹಾರಾಷ್ಟ್ರದ ಕಂದಾಯ ಸಚಿವ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬಾಲಾ ಸಾಹೇಬ್ ಥೋರತ್, ಅಖಿಲ ಭಾರತ ಕಿಸಾನ್ ಸಭಾದ ಪ್ರಧಾನ ಕಾರ್ಯದರ್ಶಿ ಹನ್ನನ್ ಮೊಲ್ಲಾ ಮತ್ತು ಇತರರು ಉಪಸ್ಥಿತರಿದ್ದರು.

ಓದಿ: ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ

ಟಾಪ್ ನ್ಯೂಸ್

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru City Corporation ಮಾಜಿ ಮೇಯರ್‌ ಅಜಿತ್‌ ಕುಮಾರ್‌ ನಿಧನ

Mangaluru City Corporation ಮಾಜಿ ಮೇಯರ್‌ ಅಜಿತ್‌ ಕುಮಾರ್‌ ನಿಧನ

6-udupi

Udupi: ಯತಿಗಳ ಸಮಾಗಮ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.