INDIA ಮೈತ್ರಿಕೂಟಕ್ಕೆ ಆಘಾತ! ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವು ನೀಡಿದ ಫಾರೂಕ್ ಅಬ್ದುಲ್ಲಾ
Team Udayavani, Feb 15, 2024, 4:20 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯಾಗುವ ಲಕ್ಷಣಗಳು ಎದುರಾಗಿದೆ. ಸೀಟು ಹಂಚಿಕೆಯ ಚರ್ಚೆಯ ನಡುವೆ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಎಲ್ಲಾ ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಗುರುವಾರ ಹೇಳಿದ್ದಾರೆ ಮತ್ತು ಭವಿಷ್ಯದಲ್ಲಿ ಅವರು ಬಿಜೆಪಿ ನೇತೃತ್ವದ ಎನ್‌ಡಿಎಗೆ ಮತ್ತೆ ಸೇರಬಹುದು ಎಂದು ಸುಳಿವು ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಅವರು ನ್ಯಾಷನಲ್ ಕಾನ್ಫರೆನ್ಸ್ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ತನ್ನ ಅರ್ಹತೆಯ ಮೇರೆಗೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಇಂಡಿಯಾ ಮೈತ್ರಿ ಕೂಟಗಳ ಜೊತೆ ಸೀಟು ಹಂಚಿಕೆಯ ಮಾತುಕತೆ ವಿಫಲವಾಗಿದೆ ಹಾಗಾಗಿ “ಸೀಟು ಹಂಚಿಕೆಗೆ ಸಂಬಂಧಿಸಿದಂತೆ, ನ್ಯಾಷನಲ್ ಕಾನ್ಫರೆನ್ಸ್ ತನ್ನ ಸ್ವಂತ ಬಲದ ಮೇಲೆ ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅದರಲ್ಲಿ ಎರಡು ಮಾತಿಲ್ಲ” ಎಂದು ಅಬ್ದುಲ್ಲಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಫಾರೂಕ್ ಅಬ್ದುಲ್ಲಾ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಮಾತನಾಡಿ, ‘ವಿವಿಧ ಪಕ್ಷಗಳಿಗೆ ಬೇರೆ ಬೇರೆ ಒತ್ತಾಯಗಳಿವೆ. ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಅಖಿಲ ಭಾರತ ಒಕ್ಕೂಟದ ಭಾಗವಾಗಿದೆ ಎಂದು ನನಗೆ ವಿಶ್ವಾಸವಿದೆ. ಮುಂದೆಯೂ ಹಾಗೆಯೇ ಉಳಿಯುತ್ತದೆ ಎಂದು ಹೇಳಿದರು.
#WATCH | Srinagar: On elections in J&K and seat sharing, National Conference Chief Farooq Abdullah says, “I think that elections in both states will be held with the Parliamentary elections. As far as seat sharing is concerned, NC will contest alone and there’s no doubt about… pic.twitter.com/e2pLpX3YVB
— ANI (@ANI) February 15, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.