ಜಮ್ಮು-ಕಾಶ್ಮೀರ; ಫಾರೂಖ್ ಅಬ್ದುಲ್ಲಾ ಗೃಹ ಬಂಧನ ಮತ್ತೆ ಮೂರು ತಿಂಗಳು ವಿಸ್ತರಣೆ
ನಿವಾಸವನ್ನು ಸಬ್ ಜೈಲು ಎಂದು ಕೇಂದ್ರಾಡಳಿತ ಪ್ರದೇಶದ ಗೃಹ ಇಲಾಖೆ ಘೋಷಿಸುವ ಸಾಧ್ಯತೆ
Team Udayavani, Dec 14, 2019, 5:04 PM IST
![Abdulla-Farooq](https://www.udayavani.com/wp-content/uploads/2019/12/Abdulla-Farooq-620x387.jpg)
![Abdulla-Farooq](https://www.udayavani.com/wp-content/uploads/2019/12/Abdulla-Farooq-620x387.jpg)
ನವದೆಹಲಿ/ಶ್ರೀನಗರ್: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಗೃಹ ಬಂಧನವನ್ನು ಮತ್ತೆ ಮೂರು ತಿಂಗಳ ಕಾಲ ಮುಂದುವರಿಸುವುದಾಗಿ ಸಬ್ ಜೈಲು ಅಧಿಕಾರಿಗಳು ಶನಿವಾರ ಘೋಷಿಸಿದ್ದಾರೆ.
ಮೂರು ಬಾರಿ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿದ್ದ, ಐದು ಬಾರಿ ಸಂಸದರಾಗಿರುವ ಫಾರೂಖ್ ಅಬ್ದುಲ್ಲಾ ಅವರ ರಕ್ಷಣೆ ಕುರಿತು ಜಮ್ಮು –ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಗೃಹ ಇಲಾಖೆಯ ಸಲಹಾ ಮಂಡಳಿ ಗೃಹ ಬಂಧನ ಮೂರು ತಿಂಗಳು ವಿಸ್ತರಿಸುವಂತೆ ಶಿಫಾರಸು ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಗುಪ್ಕಾರ್ ರಸ್ತೆ ಪ್ರದೇಶದಲ್ಲಿರುವ ಫಾರೂಖ್ ಅವರ ನಿವಾಸವನ್ನು ಸಬ್ ಜೈಲು ಎಂದು ಕೇಂದ್ರಾಡಳಿತ ಪ್ರದೇಶದ ಗೃಹ ಇಲಾಖೆ ಘೋಷಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ.
82 ವರ್ಷದ ಫಾರೂಖ್ ಅಬ್ದುಲ್ಲಾ ಸಾರ್ವಜನಿಕ ರಕ್ಷಣಾ ಕಾಯ್ದೆಗೆ ಒಳಗಾಗಿರುವ ದೇಶದ ಮೊದಲ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಜಮ್ಮು –ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿ ಜಮ್ಮು ಕಾಶ್ಮೀರ ಮತ್ತು ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿದ ನಂತರ ಆಗಸ್ಟ್ 5ರಿಂದ ಫಾರೂಖ್ ಅಬ್ದುಲ್ಲಾ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
![Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!](https://www.udayavani.com/wp-content/uploads/2025/02/8-22-150x90.jpg)
![Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!](https://www.udayavani.com/wp-content/uploads/2025/02/8-22-150x90.jpg)
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
![20](https://www.udayavani.com/wp-content/uploads/2025/02/20-3-150x80.jpg)
![20](https://www.udayavani.com/wp-content/uploads/2025/02/20-3-150x80.jpg)
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
![Kuruburu-Shanta](https://www.udayavani.com/wp-content/uploads/2025/02/Kuruburu-Shanta-150x90.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-150x90.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-150x90.jpg)
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-150x90.jpg)

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?