ಪ್ರಿಯಕರನನ್ನು ಪತಿಯೆಂದು ಹೇಳಿ ಕ್ವಾರಂಟೈನ್ ಆದ ಮಹಿಳಾ ಕಾನ್ ಸ್ಟೇಬಲ್!
Team Udayavani, Jul 17, 2020, 11:51 AM IST
ನಾಗ್ಪುರ: ಸ್ಥಳೀಯಾಡಳಿತಕ್ಕೆ ತನ್ನ ಪ್ರಿಯಕರನನ್ನು ಪತಿಯೆಂದು ಹೇಳಿ ಕ್ವಾರಂಟೈನ್ ಆಗಿದ್ದ ಮಹಿಳಾ ಕಾನ್ ಸ್ಟೇಬಲ್ ಓರ್ವರು ಸಿಕ್ಕಿಬಿದ್ದ ಘಟನೆ ನಾಗ್ಪುರದಲ್ಲಿ ನಡೆದಿದೆ.
ಆ ಮಹಿಳಾ ಕಾನ್‌ಸ್ಟೇಬಲ್‌ನ ಸಹೋದ್ಯೋಗಿಗೆ ಇತ್ತೀಚೆಗೆ ಕೋವಿಡ್-19 ವೈರಸ್ ದೃಢವಾಗಿತ್ತು. ಪ್ರಾಥಮಿಕ ಸಂಪರ್ಕದ ಕಾರಣಕ್ಕೆ ಮಹಿಳಾ ಕಾನ್‌ಸ್ಟೇಬಲ್ ಅನ್ನು ಕ್ವಾರಂಟೈನ್ ಆಗಲು ಸೂಚಿಸಲಾಗಿತ್ತು. ಈ ವಿಷಯ ಮಹಿಳಾ ಪೇದೆಗೆ ತಿಳಿಸಿದಾಗ ಆಕೆ, ‘ಅಂಚೆ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನನ್ನ ಪತಿಯನ್ನೂ ನನ್ನೊಂದಿಗೆ ಕ್ವಾರಂಟೈನ್ ಮಾಡಬೇಕು,’ ಎಂದು ಅಧಿಕಾರಿಗಳ ಬಳಿ ಹೇಳಿಕೊಂಡಿದ್ದರು. ಹೀಗಾಗಿ ಪೊಲೀಸ್ರು ತಮ್ಮ ತರಬೇತಿ ಕೇಂದ್ರದಲ್ಲಿ ಅವರಿಬ್ಬರನ್ನೂ ಕ್ವಾರಂಟೈನ್ ಆಗಲು ವ್ಯವಸ್ಥೆ ಕಲ್ಪಿಸಿದ್ದರು.
ಆದರೆ ಈ ಪೇದೆಯ ಪ್ರಿಯಕರನಿಗೆ ಅದಾಗಲೇ ಮದುವೆಯಾಗಿದೆ. ಈತ ಮೂರು ದಿನಗಳಾದರೂ ಮನೆಗೆ ಬರದ ಕಾರಣ ಆತನ ನಿಜವಾದ ಪತ್ನಿ ಆತಂಕಕ್ಕೆ ಒಳಗಾಗಿ ವಿಚಾರಿಸಿದ್ದಾರೆ. ತನ್ನ ಪತಿ ಮಹಿಳಾ ಪೇದೆಯೊಂದಿಗೆ ಕ್ವಾರಂಟೈನ್ ಬಂಧನದಲ್ಲಿರುವುದು ತಿಳಿದು ಪೊಲೀಸ್ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ್ದಾರೆ. ಆದರೆ ಅಲ್ಲಿ ಭದ್ರತಾ ಸಿಬ್ಬಂದಿ ಆಕೆಯನ್ನು ಒಳಗೆ ಬಿಟ್ಟಿರಲಿಲ್ಲ. ಹೀಗಾಗಿ ಮಹಿಳೆ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಹೀಗಾಗಿ ಸಂಪೂರ್ಣ ಪ್ರಕರಣ ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.