ನಿರ್ಮಾಪಕರ ಪತ್ನಿ-ಮಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!
Team Udayavani, Apr 8, 2021, 5:38 PM IST
ನವದೆಹಲಿ : ಬಾಲಿವುಡ್ ನಿರ್ಮಾಪಕ ಸಂತೋಷ್ ಗುಪ್ತಾ ಪತ್ನಿ ಮತ್ತು ಮಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಅಂಧೇರಿಯಲ್ಲಿ ನಡೆದಿದೆ.
ಸಂತೋಷ್ ಗುಪ್ತಾ ಪತ್ನಿ ಅಸ್ಮಿತಾ(55) ಮತ್ತು ಮಗಳು ಸೃಷ್ಠಿ ಸಾವನ್ನಪ್ಪಿರುವ ದುರ್ದೈವಿಗಳು. ತಾಯಿ ಮತ್ತು ಮಗಳು ಕಳೆದ ಸೋಮವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ.
ಕಳೆದ ಸೋಮವಾರ ನಿರ್ಮಾಪಕ ಸಂತೋಷ್ ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಕ್ಕ ಪಕ್ಕದವರು ಅಗ್ನಿಶಾಮಕದಳದ ಸಿಬ್ಬಂದಿಗೆ ವಿಷಯ ತಿಳಿಸಿದ್ದರು. ಸಿಬ್ಬಂದಿಯು ಸ್ಥಳಕ್ಕಾಗಮಿಸಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.
ಇನ್ನು ಮಾಹಿತಿ ಪ್ರಕಾರ ಸಂತೋಷ್ ಪತ್ನಿ ಅಸ್ಮಿತಾರನ್ನು ಗುಪ್ತಾರನ್ನು ಕೂಪರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಗಳು ಸೃಷ್ಠಿ ದೇಹವು ಮುಕ್ಕಾಲು ಭಾಗ ಸುಟ್ಟಿದ್ದರಿಂದ ಅವರನ್ನು ಐರೋಲಿ ನ್ಯಾಷನಲ್ ಬರ್ನ್ಸ್ ಸೆಂಟರ್ ಗೆ ರವಾನಿಸಲಾಗಿತ್ತು. ಆದ್ರೆ ತಾಯಿ ಸಾವನ್ನಪ್ಪಿದ ಮರುವದಿನವೇ ಮಗಳು ಸಹ ಪ್ರಾಣ ಬಿಟ್ಟಿದ್ದಾರೆ.
ಮೂಲಗಳ ಪ್ರಕಾರ ಅಸ್ಮಿತಾ ಕಳೆದ ಹಲವು ದಿನಗಳಿಂದ ಕಿಡ್ನಿಗೆ ಸಂಬಂಧಿಸಿದ ಕಾಯಿಲೆಯಿಂದ ನರಳುತ್ತಿದ್ದರು. ಅನಾರೋಗ್ಯದ ಕಾರಣದಿಂದ ಅಸ್ಮಿತಾ ಆತ್ಮಹತ್ಯೆಗೆ ನಿರ್ಧರಿಸಿದ್ದರು. ಇತ್ತ ಅಮ್ಮನ ಕಷ್ಟ ನೋಡಲಾರದೇ ಮಗಳೂ ಕೂಡಾ ಆತ್ಮ ಹತ್ಯೆ ಮಾಡಿಕೊಂಡಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
Uddhav Thackeray: ಚಂದ್ರಚೂಡ್ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು
Uttar Pradesh: ಹಳಿ ಮೇಲೆ ಸಿಮೆಂಟ್ ಕಲ್ಲಿಟ್ಟು ರೈಲು ಹಳಿತಪ್ಪಿಸಲು ಪ್ರಯತ್ನ
MUST WATCH
ಹೊಸ ಸೇರ್ಪಡೆ
Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.