ರೈತರಿಗೆ ಹಣಕಾಸು ನೆರವು ಶೀಘ್ರ ಘೋಷಣೆ ಸಾಧ್ಯತೆ
Team Udayavani, Jan 12, 2019, 9:40 AM IST
ಹೊಸದಿಲ್ಲಿ: ಜನರಲ್ ಕೆಟಗರಿಯಲ್ಲಿ ಬರುವ ಬಡವರಿಗೆ ಶೇ.10 ಮೀಸಲಾತಿ ಕಲ್ಪಿಸಿ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ, ಸದ್ಯದಲ್ಲೇ ಸಾರ್ವತ್ರಿಕ ಮೂಲ ಆದಾಯ ಮತ್ತು ರೈತರ ಅನುಕೂಲಕ್ಕಾಗಿ ಹೊಸ ಯೋಜನೆಯನ್ನು ಘೋಷಿ ಸುವ ಸಾಧ್ಯತೆಯಿದೆ. ದೇಶದ ಜನಸಂಖ್ಯೆಯ ಶೇ.47ರಷ್ಟಿರುವ ರೈತರಿಗೆ ತೆಲಂಗಾಣದ ರೈತ ಬಂಧು ಯೋಜನೆಯ ಮಾದರಿಯಲ್ಲೇ ಹೊಸ ಯೋಜನೆ ಜಾರಿ ಮಾಡಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. ಅದರಂತೆ, ಒಂದು ಎಕರೆಗಿಂತ ಕಡಿಮೆ ಕೃಷಿ ಭೂಮಿಯಲ್ಲಿ ವ್ಯವಸಾಯ ಮಾಡುವ ರೈತರಿಗೆ ಎಕರೆಗೆ 4 ಸಾವಿರ ರೂ.ಗಳು ಅಥವಾ ಆ ಕೃಷಿ ಭೂಮಿಯ ಪ್ರಮಾಣಕ್ಕೆ ಅನುಗುಣವಾಗಿ ನಗದು ನೀಡುವ ಯೋಜನೆ ಇದಾಗಿದೆ. ಹಿಂಗಾರು ಮತ್ತು ಮುಂಗಾರು ಋತುವಿನಲ್ಲಿ ಈ ಮೊತ್ತ ನೀಡಲು ಚಿಂತನೆ ನಡೆಸಲಾಗಿದೆ.
ಆದರೆ, ಇದರ ಫಲಾನುಭವಿಗಳಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜದ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ, ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2,500 ರೂ. ನೀಡುವ ಸಾರ್ವತ್ರಿಕ ಮೂಲ ಆದಾಯವನ್ನೂ ಸರಕಾರ ಸದ್ಯದಲ್ಲೇ ಘೋಷಿಸುವ ನಿರೀಕ್ಷೆಯಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.