ಮಹಿಳೆಯರಿಗೆ ಆರ್ಥಿಕ ಸ್ವಾತಂತ್ರ್ಯ ಅಗತ್ಯ
Team Udayavani, Jul 13, 2018, 6:00 AM IST
ನವದೆಹಲಿ: ಆರ್ಥಿಕವಾಗಿ ಸದೃಢವಾಗಿರುವ ಮಹಿಳೆಯರು ಸಮಾಜದಲ್ಲಿನ ಪಿಡುಗುಗಳಿಗೆ ತಡೆಯಾಗಿ ನಿಲ್ಲುತ್ತಾರೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುರುವಾರ ನರೇಂದ್ರ ಮೋದಿ ಮೊಬೈಲ್ ಆ್ಯಪ್ ಮೂಲಕ ವಿವಿಧ ಸ್ವಸಹಾಯ ಸಂಘಗಳ ಒಂದು ಕೋಟಿಗೂ ಅಧಿಕ ಮಂದಿ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿದ ವೇಳೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಹಿಳೆಯರ ಸಬಲೀಕರಣ ಆಗಬೇಕೆಂದರೆ, ಆರ್ಥಿಕ ಸ್ವಾತಂತ್ರ್ಯ ಅತ್ಯಗತ್ಯ. ಇತ್ತೀಚೆಗೆ ಮಹಿಳೆಯರು ಉದ್ಯಮಶೀಲರಾಗಿದ್ದಾರೆ. ಅವರಲ್ಲಿ ಅಂಥ ಸಾಧನೆ ಮಾಡಲು ಸಾಮರ್ಥ್ಯವಿದೆ. ಅವರಿಗೆ ನಾವು ಏನನ್ನೂ ಕಲಿಸಬೇಕಾಗಿಲ್ಲ, ಅವಕಾಶಗಳನ್ನು ಒದಗಿಸಿದರೆ ಸಾಕು ಎಂದು ಪ್ರಧಾನಿ ಹೇಳಿದರು.
ಗ್ರಾಮೀಣ ಪ್ರದೇಶದಲ್ಲಿ ಸರ್ವಾಂಗೀಣ ಅಭಿವೃದ್ಧಿ ಸಾಧಿಸಬೇಕಾದರೆ ಮಹಿಳೆಯರಿಗೆ ಹೆಚ್ಚಿನ ರೀತಿಯಲ್ಲಿ ಅವಕಾಶ ಸಿಗಬೇಕು ಎಂದಿದ್ದಾರೆ. ಮಹಿಳಾ ಸ್ವಸಹಾಯ ಸಂಘಗಳು ಗ್ರಾಮೀಣಾಭಿವೃದ್ಧಿಯಲ್ಲಿ ಹೆಚಿನ ಪಾತ್ರ ವಹಿಸುತ್ತಿವೆ ಎಂದು ಮೆಚ್ಚುಗೆ ಮಾತುಗಳನ್ನಾಡಿದ್ದಾರೆ ಪ್ರಧಾನಿ ನರೇಂದ್ರ ಮೋದಿ.
ಹಾಲಿ ಸರ್ಕಾರ 2014ರಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ ಸರ್ಕಾರ 20 ಲಕ್ಷ ಸ್ವಸಹಾಯ ಸಂಘಗಳನ್ನು ರಚನೆ ಮಾಡಿದೆ. ಸುಮಾರು 2.25 ಕೋಟಿ ಕುಟುಂಬಗಳನ್ನು ಈ ಸಂಘದ ವ್ಯಾಪ್ತಿಗೆ ತರಲಾಗಿದೆ ಎಂದೂ ಪ್ರಧಾನಿ ಮೋದಿ ಹೇಳಿದ್ದಾರೆ. ಸಂವಾದದ ವೇಳೆ ಅನೇಕ ಮಹಿಳೆಯರು, ತಮ್ಮ ಬದುಕಿನ ಸುಧಾರಣೆಗೆ ಸ್ವಸಹಾಯ ಸಂಘಗಳು ಹೇಗೆ ಸಹಾಯ ಮಾಡಿದವು ಎಂಬುದನ್ನೂ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.