ಪಂಚತಾರಾ ಹೋಟೆಲ್ ನಲ್ಲಿ ಭಾರೀ ಅಗ್ನಿ ಅನಾಹುತ; ಜನರು ಪವಾಡಸದೃಶ ಪಾರು
Team Udayavani, Oct 21, 2019, 1:41 PM IST
ಮಧ್ಯಪ್ರದೇಶ: ಪಂಚತಾರಾ ಗೋಲ್ಡನ್ ಗೇಟ್ ಹೋಟೆಲ್ ನಲ್ಲಿ ಏಕಾಏಕಿ ಭಾರೀ ಅಗ್ನಿ ಅನಾಹುತ ಸಂಭವಿಸಿದ ಘಟನೆ ಇಂದೋರ್ ನ ವಿಜಯ್ ನಗರ್ ಪ್ರದೇಶದಲ್ಲಿದೆ ನಡೆದಿದೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪ್ರಾಥಮಿಕ ವರದಿ ತಿಳಿಸಿದೆ.
ಘಟನಾ ಸ್ಥಳಕ್ಕೆ ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಬೆಂಕಿ ಹೊತ್ತಿ ಉರಿಯುತ್ತಿರುವ ವೇಳೆ ನಾಲ್ಕು ಅಂತಸ್ತಿನ ಪಂಚತಾರಾ ಹೋಟೆಲ್ ಒಳಗಡೆ ನೂರಾರು ಗ್ರಾಹಕರು ಸಿಲುಕಿ ಹಾಕಿಕೊಂಡಿದ್ದರು ಎಂದು ವರದಿ ಹೇಳಿದೆ.
ಹೋಟೆಲ್ ಒಳಗಿದ್ದವರನ್ನು ಸುರಕ್ಷಿತವಾಗಿ ಹೊರ ಕರೆತರಲಾಗಿದೆ. ಅಲ್ಲದೇ ಸಮೀಪದ ಕಟ್ಟಡಗಳಲ್ಲಿದ್ದ ಜನರನ್ನು ಸುರಕ್ಷತೆಯ ದೃಷ್ಟಿಯಲ್ಲಿ ಬೇರೆಗೆ ಸ್ಥಳಾಂತರಿಸಲಾಗಿದೆ. ಈವರೆಗೆ ಯಾವುದೇ ಸಾವು, ನೋವಿನ ಕುರಿತು ಮಾಹಿತಿ ಲಭ್ಯವಾಗಿಲ್ಲ ಎಂದು ಮಹಾನಗರ ಪಾಲಿಕೆಯ ಡೆಪ್ಯುಟಿ ಕಮೀಷನರ್ ಮಹೇಂದ್ರ ಸಿಂಗ್ ಚೌಹಾಣ್ ಪಿಟಿಐಗೆ ತಿಳಿಸಿದ್ದಾರೆ.
25 ಕೋಣೆಯನ್ನೊಳಗೊಂಡ ಐಶಾರಾಮಿ ಹೋಟೆಲ್ ನಲ್ಲಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ತಿಳಿದುಬಂದಿಲ್ಲ. ಎಎನ್ ಐ ನ್ಯೂಸ್ ಏಜೆನ್ಸಿ ಹೋಟೆಲ್ ಮುಂಭಾಗ ಬೆಂಕಿಯಿಂದ ಹೊತ್ತಿ ಉರಿಯುತ್ತಿರುವ ಫೋಟೋವನ್ನು ಶೇರ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.