ಪಟಾಕಿ ಅನಾಹುತ: ದೇಶಾದ್ಯಂತ 14 ಬಲಿ
Team Udayavani, Oct 28, 2019, 10:34 PM IST
ನವದೆಹಲಿ: ದೀಪಾವಳಿ ಹಬ್ಬ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿಸುವಾಗ ಅನಾಹುತಗಳು ಸಂಭವಿಸಿ ದೇಶಾದ್ಯಂತ 9 ಮಂದಿ ಬಲಿಯಾಗಿದ್ದಾರೆ.
ನೂರಾರು ಮಂದಿ ಕಣ್ಣಿಗೆ ಹಾನಿ, ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಹಚ್ಚುವಾಗ, ಮನೆಗಳು, ಅಂಗಡಿಗಳಿಗೆ ಬೆಂಕಿ ಹತ್ತಿಕೊಂಡು ಪ್ರತ್ಯೇಕ ಘಟನೆಗಳಲ್ಲಿ ಒಟ್ಟಾರೆ 7 ಮಂದಿ ಮೃತಪಟ್ಟಿದ್ದಾರೆ. ಆದರೆ, ದೆಹಲಿಯಲ್ಲಿ 2017ರಲ್ಲಿ ಸುಡುಮದ್ದುಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಹಾನಿಯ ಪ್ರಮಾಣ ಈ ಬಾರಿ ಕಡಿಮೆಯಾಗಿದೆ.
ಇನ್ನು ಒಡಿಶಾದಲ್ಲಿ ಪಟಾಕಿ ಸಂಬಂಧಿ ಘಟನೆಗಳಿಗೆ 5 ಮಂದಿ ಬಲಿಯಾಗಿದ್ದರೆ, ಪಶ್ಚಿಮ ಬಂಗಾಳದಲ್ಲಿ 2 ವರ್ಷದ ಬಾಲಕ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಸುಟ್ಟಗಾಯಗಳು, ಕಣ್ಣಿಗೆ ಹಾನಿಯಾಗಿ 498 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನಲ್ಲಿ 31 ರೋಗಿಗಳು, ಹೈದರಾಬಾದ್‌ನಲ್ಲಿ 77 ಮಂದಿಗೆ ಚಿಕಿತ್ಸೆ ನೀಡಲಾಗಿದೆ.
ದೆಹಲಿಯೊಂದರಲ್ಲೇ 200 ಅಗ್ನಿ ಅನಾಹುತದ ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.