ಪ್ರತಿಭಟನೆ: ಆರು ವರ್ಷದ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಲ್ಲಿ ದೂರು; ಪೊಲೀಸರ ಎಡವಟ್ಟು
Team Udayavani, Jan 3, 2020, 9:14 AM IST
ಲಕ್ನೋ: ಉತ್ತರ ಪ್ರದೇಶದ ಫಿರೋಜಾಬಾದ್ ಪೊಲೀಸರಿಗೆ ಅತಿದೊಡ್ಡ ಮುಖಭಂಗವಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ಬಳಿಕ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ ಭಂಗ ತರುವವರ ಪಟ್ಟಿಯೊಂದನ್ನು ಪೊಲೀಸರು ಸಿದ್ಧಪಡಿಸಿದ್ದಾರೆ. ಆ ಪಟ್ಟಿಯಲ್ಲಿ 200 ಮಂದಿಯ ಹೆಸರಿದೆ.
ಅಚ್ಚರಿಯೆಂದರೆ, 6 ವರ್ಷಗಳ ಹಿಂದೆಯೇ ಮೃತಪಟ್ಟಿರುವ ವ್ಯಕ್ತಿ, ಅನಾರೋಗ್ಯ ಪೀಡಿತರಾಗಿ ಹಾಸಿಗೆ ಹಿಡಿದಿರುವ 93ರ ವೃದ್ಧ, 90 ವರ್ಷ ವಯಸ್ಸಿನ ಮತ್ತೋಬ್ಬ ಹಿರಿಯ ವ್ಯಕ್ತಿಯ ಹೆಸರುಗಳೂ ಈ ಪಟ್ಟಿಯಲ್ಲಿವೆ. ಇವರ ಮನೆಗಳಿಗೆ ನೋಟಿಸ್ ಹೋಗಿದ್ದು, 10 ಲಕ್ಷ ರೂ. ಬಾಂಡ್‌ಗೆ ಸಹಿ ಮಾಡುವಂತೆ, ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
58 ಮಂದಿಗೆ ಜಾಮೀನು: ಸಿಎಎ ವಿರುದ್ಧ ಪ್ರತಿಭಟಿಸಿ ಬಂಧನಕ್ಕೊಳಗಾಗಿದ್ದ 58 ಮಂದಿಗೆ ಉತ್ತರ ಪ್ರದೇಶದ ಕೋರ್ಟ್ ಜಾಮೀನು ನೀಡಿದ್ದು, ಗುರುವಾರ ಅವರು ಬಿಡುಗಡೆಗೊಂಡಿದ್ದಾರೆ. ಈ ಪೈಕಿ ಎನ್‌ಜಿಒವೊಂದನ್ನು ನಡೆಸುತ್ತಿರುವ ಏಕ್ತಾ ಮತ್ತು ರವಿಶೇಖರ್ ದಂಪತಿಯೂ ಸೇರಿದ್ದು, ಇವರು ತಮ್ಮ 14 ತಿಂಗಳ ಕೂಸನ್ನು ಮತ್ತೆ ಸೇರಿದ್ದಾರೆ. ಹೆತ್ತವರ ಬಂಧನದಿಂದಾಗಿ ಕೂಸು ಏಕಾಂಗಿಯಗಿದ್ದರ ಕುರಿತು ಭಾರೀ ಸುದ್ದಿಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.