ಕೋವಿಡ್-19 ಮಹಾಮಾರಿಗೆ ಅಸ್ಸಾಂನಲ್ಲಿ ಮೊದಲ ಬಲಿ
Team Udayavani, Apr 10, 2020, 8:58 AM IST
Workers prepare an isolation ward at the Civil Hospital in wake of coronavirus pandemic, during the nationwide lockdown, in Assam
ಅಸ್ಸಾಂ: ಕೋವಿಡ್ 19 ಅಟ್ಟಹಾಸಕ್ಕೆ ಈಶಾನ್ಯ ರಾಜ್ಯದಲ್ಲಿ ಮೊದಲ ಬಲಿಯಾಗಿದ್ದು, ಕಳೆದ ಎರಡು ವಾರಗಳಿಂದ ಸೋಂಕಿನಿಂದ ಬಳಲುತ್ತಿದ್ದ ಅಸ್ಸಾಂ ರಾಜ್ಯದ ಹೈಲಕಂಡಿ ಜಿಲ್ಲೆಯ 65 ವರ್ಷದ ವೃದ್ಧರೋರ್ವರು ಇಂದು ಮೃತಪಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಸ್ಸಾಂನ ಆರೋಗ್ಯ ಸಚಿವ ಹಿಮಂತ್ ಬಿಸ್ವಾ ಶರ್ಮಾ, ‘ಕೋವಿಡ್ 19 ವೈರಸ್‌ಗೆ ಅಸ್ಸಾಂ ರಾಜ್ಯದಲ್ಲಿ ಮೊದಲ ಬಲಿ ಆಗಿದೆ ಎಂದು ತಿಳಿಸಲು ನಾನು ವಿಷಾಧಿಸುತ್ತೇನೆ. ಆ ಕುಟುಂಬಕ್ಕೆ ದೇವರು ನೋವನ್ನು ಬರಿಸುವ ಶಕ್ತಿ ನೀಡಲಿ” ಎಂದು ಸಂತಾಪ ಸೂಚಿಸಿದ್ದಾರೆ.
ಈ ವೃದ್ಧ ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದು ಮಾತ್ರವಲ್ಲದೆ ಸೌದಿ ಆರೇಬಿಯಾಕ್ಕೆ ಕೆಲ ತಿಂಗಳಷ್ಟೆ ಹಿಂದೆ ಭೇಟಿ ನೀಡಿ ಹಿಂದಿರುಗಿದ್ದರು ಆರೋಗ್ಯ ಸಚಿವ ಮಾಹಿತಿ ನೀಡಿದ್ದಾರೆ.
ಹೈಲಕಂಡಿ ಗ್ರಾಮವನ್ನು ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ. ಅಸ್ಸಾಂ ನಲ್ಲಿ ಈಗಾಗಲೇ 29 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.