![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ದೇಶದಲ್ಲಿಯೇ ಪ್ರಥಮ!;ನಮಾಜ್‌ಗೆ ಜಮಿತಾ ನೇತೃತ್ವ
Team Udayavani, Jan 28, 2018, 11:26 AM IST
![2-vff.jpg](https://www.udayavani.com/wp-content/uploads/2018/01/28/2-vff.jpg)
ಮಲಪ್ಪುರಂ: ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕೇರಳದಲ್ಲಿ ಮುಸ್ಲಿಂ ಮಹಿಳೆ ಜಮಿತಾ (34)ಎಂಬುವರು ಶುಕ್ರವಾರ (ಜ.26)ದ ನಮಾಜ್ (ಜುಮಾ)ನ ನೇತೃತ್ವ ವಹಿಸಿಕೊಳ್ಳುವ ಮೂಲಕ ಸುದ್ದಿಯಾಗಿದ್ದಾರೆ.
ಬಹುತೇಕ ಸಂದರ್ಭಗಳಲ್ಲಿ ಜುಮಾವನ್ನು ಪುರುಷ ಧರ್ಮ ಗುರುಗಳೇ ನಡೆಸಿಕೊಡುತ್ತಾರೆ. ಆದರೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಇಮಾಮ್ ಆಗಿರುವ ಜಮಿತಾ ಅವರು ಈ ಕಾರ್ಯ ನಡೆಸಿಕೊಟ್ಟಿದ್ದಾರೆ. ಕುರಾನ್ ಸುನ್ನತ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಅವರು, ವೃತ್ತಿಯಲ್ಲಿ ಅಧ್ಯಾಪಕಿಯಾಗಿದ್ದಾರೆ. ಮೂಲತಃ ಅವರು ತಿರುವನಂತಪುರದವರು. ಕೆಲ ವರ್ಷಗಳ ಹಿಂದೆ ಜಮಿತಾರಿಗೆ ಬೆದರಿಕೆ ಕರೆಗಳೂ ಬಂದಿದ್ದವು.
ಶುಕ್ರವಾರ ನಡೆದ ಪ್ರಾರ್ಥನೆಯಲ್ಲಿ ಸುಮಾರು 80 ಮಂದಿ ಭಾಗವಹಿಸಿದ್ದರು. ಕುರಾನ್ ಸುನ್ನತ್ ಸೊಸೈಟಿಯ ಕಾರ್ಯಾಲಯದಲ್ಲಿ ಈ ಪ್ರಾರ್ಥನೆ ನಡೆದಿದೆ.ಈ ಬಗ್ಗೆ ಮಾತನಾಡಿದ ಅವರು, “ಕುರಾನ್‌ನಲ್ಲಿ ಎಲ್ಲೂ ಮಹಿಳೆಯರ ಬಗ್ಗೆ ತಾರತಮ್ಯ ಮಾಡಲಾಗಿಲ್ಲ. ಜತೆಗೆ ಇಮಾಮ್ ಆಗಿ ಕರ್ತವ್ಯ ನಿರ್ವಹಿಸಬಾರದು ಎಂದು ಹೇಳಿಲ್ಲ. ಇದೇ ಮೊದಲ ಬಾರಿಗೆ ನಾನು ಪ್ರಾರ್ಥನೆಯ ನೇತೃತ್ವ ವಹಿಸುತ್ತಿದ್ದೇನೆ. ನಮ್ಮ ಕಚೇರಿಯಲ್ಲಿ ಪ್ರತಿ ಶುಕ್ರವಾರ ಈ ರೀತಿ ಪ್ರಾರ್ಥನೆ ನಡೆಸಿಕೊಡುತ್ತಿದ್ದೇನೆ’ ಎಂದು ಜಮಿತಾ ಹೇಳಿದ್ದಾರೆ.
ಮಸೀದಿಯಲ್ಲಿಯೇ ಶುಕ್ರವಾರದ ಪ್ರಾರ್ಥನೆ ನಡೆಯಬೇಕು ಎಂಬ ನಿಯಮ ಇಲ್ಲ ಎಂದೂ ಅವರು ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಎಲ್ಲರ ಜತೆ ಚರ್ಚೆ ನಡೆಸಿಯೇ ಪ್ರಾರ್ಥನೆಯ ನೇತೃತ್ವ ವಹಿಸಿದ್ದಾಗಿ ಹೇಳಿದ್ದಾರೆ ಜಮಿತಾ. ಈ ಬೆಳವಣಿಗೆ ಕೇರಳದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
![Atlee to collaborate with Salman Khan](https://www.udayavani.com/wp-content/uploads/2024/12/atlee-150x87.jpg)
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.