ಮೋದಿ ಐದು ದಿನ ಗಳ ಅಮೆರಿಕ ಪ್ರವಾಸ : ಬಾಂಧವ್ಯಾಭಿವೃದ್ಧಿಗೆ ಒತ್ತು
Team Udayavani, Sep 22, 2021, 6:50 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಯವರ, ಬಹುನಿರೀಕ್ಷೆಯ ಅಮೆರಿಕ ಪ್ರವಾಸ ಬುಧ ವಾ ರ ಆರಂಭಗೊಳ್ಳಲಿದ್ದು, ಸೆ. 26ರಂದು ಅವರು ಭಾರತಕ್ಕೆ ಹಿಂದಿರುಗಲಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆಯ ಕಾರ್ಯ ದರ್ಶಿ ಹರ್ಷ್ ಶ್ರಿಂಗ್ಲಾ ತಿಳಿಸಿದ್ದಾರೆ.
ಬುಧವಾರವೇ ವಾಷಿಂಗ್ಟನ್ ತಲುಪಲಿರುವ ಪ್ರಧಾನಿ, ಅದರ ಮರುದಿನವೇ ಅಮೆರಿಕದ ವಾಣಿಜ್ಯೋದ್ಯಮಿಗಳನ್ನು ಭೇಟಿಯಾಗ ಲಿದ್ದಾರೆ. ಅದೇ ದಿನ, ಸೆ. 24ರಂದು ವಾಷಿಂಗ್ಟನ್‌ನಲ್ಲಿ ನಡೆಯಲಿರುವ ಕ್ವಾಡ್ ರಾಷ್ಟ್ರಗಳ ಶೃಂಗಸಭೆ ಯಲ್ಲಿ ಭಾಗವಹಿಸಲು ಅಮೆರಿಕಕ್ಕೆ ಆಗಮಿಸಲಿ ರುವ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮ್ಯಾರಿಸನ್, ಜಪಾನ್ ಪ್ರಧಾನಿ ಯೊಶಿಹಿಡೆ ಸುಗಾ ಅವರನ್ನು ಭೇಟಿ ಮಾಡಲಿದ್ದಾರೆ. ಅದೇ ದಿನ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಭೇಟಿ ಮಾಡಲಿದ್ದು, ಅದರ ಮರುದಿನ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಅವರನ್ನು ಭೇಟಿ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಉಭಯ ನಾಯಕರು, ಎರಡೂ ದೇಶಗಳ ನಡುವಿನ ಬಾಂಧ್ಯವ್ಯಾಭಿ ವೃದ್ಧಿ ಬಗ್ಗೆ ಚರ್ಚಿಸಲಿದ್ದು, ವಾಣಿಜ್ಯ, ಹೂಡಿಕೆ, ರಕ್ಷಣೆ ಮತ್ತು ಭದ್ರತೆ ವಿಚಾರದಲ್ಲೂ ಮಾತುಕತೆ ನಡೆಸಲಿದ್ದಾರೆ ಎಂದು ಶ್ರಿಂಗ್ಲಾ ತಿಳಿಸಿದ್ದಾರೆ.
“ಚರ್ಚೆಯ ವೇಳೆ, ಅಫ್ಘಾನಿಸ್ಥಾನದ ಪ್ರಸಕ್ತ ಸನ್ನಿವೇಶವೂ ಪ್ರಸ್ತಾವವಾಗುವ ಸಾಧ್ಯತೆಯಿದೆ. ಬೈಡೆನ್ ಜತೆಗಿನ ಚರ್ಚೆಯ ಅನಂತರ ಕಮಲಾ ಹ್ಯಾರಿಸ್ ಅವರನ್ನೂ ಭೇಟಿ ಮಾಡಲಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಮೋದಿಯೊಂದಿಗೆ, ವಿದೇಶಾಂಗ ಸಚಿವ ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಕಾರ್ಯದರ್ಶಿ ಶ್ರಿಂಗ್ಲಾ ಹಾಗೂ ಇನ್ನಿತರ ಪ್ರಮುಖ ಅಧಿಕಾರಿಗಳು ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಷಣ :
ಸೆ. 25ರಂದು ನ್ಯೂಯಾರ್ಕ್‌ಗೆ ಪ್ರಯಾಣಿಸಲಿರುವ ಮೋದಿ, ಅಲ್ಲಿ ವಿಶ್ವಸಂಸ್ಥೆಯ 76ನೇ ಅಧಿವೇಶನವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮ್ಯಾರಿಸನ್, ಜಪಾನ್ ಪ್ರಧಾನಿ ಯೊಶಿಹಿಡೆ ಸುಗಾ ಮುಂತಾದವರು ಭಾಗವಹಿಸಲಿದ್ದಾರೆ. ದಕ್ಷಿಣ ಚೀನ ಸಮುದ್ರದಲ್ಲಿ ಕೆಲವು ದೇಶಗಳ ಪಾರುಪತ್ಯವನ್ನು ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಲ್ಲಿ ಚರ್ಚೆಯಾಗುವ ಸಾಧ್ಯತೆಗಳಿವೆ.
ಶೀತಲ ಸಮರಕ್ಕೆ ಗುಡ್‌ಬೈ: ಬೈಡೆನ್ ಘೋಷಣೆ ಸಾಧ್ಯತೆ:
ಚೀನ ಸೇರಿದಂತೆ ಜಗತ್ತಿನ ಯಾವುದೇ ರಾಷ್ಟ್ರದ ವಿರುದ್ಧ ಅಮೆರಿಕ ಶೀತಲ ಸಮರ ನಡೆಸುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಸದ್ಯದಲ್ಲೇ ಘೋಷಿಸುವ ಸಾಧ್ಯತೆಯಿದೆ. ಸೆ. 25ರಂದು ವಿಶ್ವಸಂಸ್ಥೆ 76ನೇ ಮಹಾಧಿವೇಶನ ಜರಗಲಿದೆ. ಅದರಲ್ಲಿ ಬೈಡನ್ ಅವರು ತಮ್ಮ ಚೊಚ್ಚಲ ಭಾಷಣ ಮಾಡಲಿದ್ದಾರೆ. ಆ ಸಂದರ್ಭದಲ್ಲೇ ಈ ಘೋಷಣೆ ಹೊರಬೀಳುವ ಸಾಧ್ಯತೆಯಿದೆ ಎಂದು ವೈಟ್‌ಹೌಸ್‌ನ ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕ್ವಾಡ್‌ನಲ್ಲಿ ಭಾಗಿ:
ಅಮೆರಿಕದ ನಾಯಕರ ಭೇಟಿಯ ಅನಂತರ ಮೋದಿ, ಸೆ. 24ರಂದು ವಾಷಿಂಗ್ಟನ್‌ನಲ್ಲಿ ಜರಗಲಿರುವ ಕ್ವಾಡ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಇದು, ಕ್ವಾಡ್‌ನಲ್ಲಿ ಮೋದಿಯವರ ಮೊದಲ ವೈಯಕ್ತಿಕ ಸಹಭಾಗಿತ್ವ. ಈ ಸಮ್ಮೇಳನದಲ್ಲಿ ಹಲವಾರು ಜಾಗತಿಕ ಹಾಗೂ ಪ್ರಾಂತೀಯ ಸಮಸ್ಯೆಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆಗಳಿವೆ. ಇಂಡೋ-ಪೆಸಿಫಿಕ್ ಪ್ರಾಂತ್ಯಗಳ ರಾಷ್ಟ್ರಗಳ ನಡುವಿನ ಸಹಕಾರ ಮತ್ತಿತರ ವಿಚಾರಗಳೂ ಇಲ್ಲಿ ಚರ್ಚೆಗೆ ಬರಲಿವೆ. ಇದಲ್ಲದೆ, ಹೊಸದಾಗಿ ಉದಯವಾಗಿ ರುವ ಅಪಾಯಕಾರಿ ತಂತ್ರಜ್ಞಾನಗಳು, ಸೈಬರ್ ಸುರಕ್ಷೆ, ಸಾಗರ ಸಂಪತ್ತಿನ ಸುರಕ್ಷತೆ, ಮಾನವತೆಯ ಸಹಕಾರ, ಪ್ರಕೃತಿ ವಿಕೋಪದ ವೇಳೆ ಸಹಕಾರ, ಹವಾಮಾನ ಬದಲಾವಣೆ ಸಮಸ್ಯೆ ನಿರ್ವಹಣೆ ಹಾಗೂ ಶಿಕ್ಷಣದ ಬಗ್ಗೆ ನಾಯಕರು ಚರ್ಚಿಸಲಿದ್ದಾರೆ. ಇದೇ ವೇಳೆ, ಕ್ವಾಡ್ ಒಕ್ಕೂಟದ ಆವಶ್ಯಕತೆ ಬಗ್ಗೆ ಎದ್ದಿರುವ ಟೀಕೆಗಳಿಗೆ ಅಮೆರಿಕ ಸರಕಾರ ದಿಟ್ಟ ಉತ್ತರ ನೀಡಲಿದ್ದು, ಕ್ವಾಡ್ ರಚನೆಯನ್ನು ಸಮರ್ಥಿಸಿಕೊಳ್ಳಲಿದೆ ಎಂದು ಹೇಳಲಾಗಿದೆ. ಈ ಹಿಂದೆ, 2019ರಲ್ಲಿ ಮೋದಿಯವರು ಅಮೆರಿಕಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜತೆ ಹ್ಯೂಸ್ಟನ್‌ನಲ್ಲಿ ಆಯೋಜಿಸಲಾಗಿದ್ದ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.