ವಿಮಾನದಲ್ಲಿ ಬರಲಿದೆ ಲಸಿಕೆ: ಸ್ವೀಕಾರಕ್ಕೆ ಸಿದ್ಧರಾಗಿ ಎಂದು ರಾಜ್ಯಗಳಿಗೆ ಸೂಚನೆ
Team Udayavani, Jan 7, 2021, 10:22 PM IST
ಹೊಸದಿಲ್ಲಿ: ಕೋವಿಡ್ ಲಸಿಕೆ ವಿತರಣೆಗೆ ದಿನಗಣನೆ ಆರಂಭವಾಗಿದ್ದು, “ಮೊದಲ ಹಂತದ ಲಸಿಕೆಗಳ ಸ್ವೀಕಾರಕ್ಕೆ ಸಿದ್ಧರಾಗಿ’ ಎಂಬ ಸಂದೇಶವನ್ನು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರಕಾರ ಗುರುವಾರ ರವಾನಿಸಿದೆ.
ಇದಕ್ಕೆ ಪೂರಕವಾಗಿ ದೇಶದ ಮೂಲೆ ಮೂಲೆಗಳಿಗೂ ಲಸಿಕೆಗಳನ್ನು ತಲುಪಿಸಲು ಎಲ್ಲ ಸಿದ್ಧತೆಗಳು ನಡೆಯುತ್ತಿದ್ದು, ಇದಕ್ಕಾಗಿ ವಾಯುಪಡೆಯ ಸರಕು ಸಾಗಣೆ ವಿಮಾನಗಳನ್ನು ಸರಕಾರ ಬಳಸಿಕೊಳ್ಳಲಿದೆ.
ಆರಂಭದಲ್ಲಿ ಕರ್ನಾಟಕ ಸಹಿತ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಗುರುತಿಸಲಾಗಿರುವ ಕೇಂದ್ರಗಳಿಗೆ ಲಸಿಕೆ ಸರಬರಾಜು ಮಾಡಲಾಗುತ್ತದೆ. ಉಳಿದ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರಕಾರಿ ಔಷಧ ಡಿಪೋಗಳಿಗೆ ಲಸಿಕೆ ರವಾನಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಲಸಿಕೆಗಳನ್ನು ಸ್ವೀಕರಿಸಲು ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದೂ ಸೂಚಿಸಿದೆ.
ವಿಶೇಷ ಕಂಟೈನರ್‌ಗಳು
ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್‌ನ ನಿರ್ಬಂಧಿತ ತುರ್ತು ಬಳಕೆಗೆ ಅನುಮತಿ ಸಿಕ್ಕಿರುವ ಕಾರಣ ಎರಡೂ ಕಂಪೆನಿಗಳು ಸೂಕ್ತ ತಾಪಮಾನದಲ್ಲಿ ಲಸಿಕೆಗಳ ಸಾಗಾಟಕ್ಕೆ ವಿಶೇಷ ಕಂಟೈನರ್‌ಗಳನ್ನು ಸಿದ್ಧಪಡಿಸಿವೆ. ಅರುಣಾಚಲ, ಲಡಾಖ್‌ನಂಥ ಪ್ರದೇಶಗಳಿಗೆ ಲಸಿಕೆ ತಲುಪಿಸಲು ವಾಯುಪಡೆ ತನ್ನ ವಿಶೇಷ ಸೇನಾ ವಾಯುನೆಲೆಗಳು ಮತ್ತು ಸುಧಾರಿತ ಲ್ಯಾಂಡಿಂಗ್ ಪ್ರದೇಶಗಳನ್ನು ಬಳಸಿಕೊಳ್ಳಲಿದೆ ಎನ್ನಲಾಗಿದೆ. ಅಗತ್ಯಬಿದ್ದರೆ ಹೆಲಿಕಾಪ್ಟರ್‌ಗಳನ್ನೂ ಉಪಯೋಗಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.