Cloudburst: ಸಿಕ್ಕಿಂನಲ್ಲಿ ಮೇಘಸ್ಫೋಟ: ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ
Team Udayavani, Oct 4, 2023, 9:36 AM IST
ಗ್ಯಾಂಗ್ಟಾಕ್: ಸಿಕ್ಕಿಂ ಲಾಚೆನ್ ಕಣಿವೆಯ ತೀಸ್ತಾ ನದಿಯಲ್ಲಿ ಬುಧವಾರ ತಡ ರಾತ್ರಿ ಹಠಾತ್ ಪ್ರವಾಹ ಉಂಟಾಗಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಸಿಕ್ಕಿಂನ ಲ್ಹೋನಕ್ ಸರೋವರದಲ್ಲಿ ಹಠಾತ್ ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿದೆ, ಇದು ತೀಸ್ತಾದಲ್ಲಿ ನೀರಿನ ಮಟ್ಟದಲ್ಲಿ ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಚುಂಗ್‌ತಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿರುವುದರಿಂದ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಳಿಸಿತು, ಇದರಿಂದಾಗಿ ನೀರಿನ ಮಟ್ಟವು ಹೆಚ್ಚಳಕ್ಕೆ ಕಾರಣವಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಿಂಗ್ಟಮ್ ಬಳಿಯ ಬರ್ದಂಗ್‌ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳು ಪ್ರವಾಹಕ್ಕೆ ಕೊಚ್ಚಿ ಹೋಗಿದ್ದು. ಸುಮಾರು 23 ಮಂದಿ ಸಿಬಂದಿಗಳು ನಾಪತ್ತೆಯಾಗಿದ್ದು, ಸಿಬ್ಬಂದಿ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.
ನದಿ ಉಕ್ಕಿ ಹರಿಯುತ್ತಿರುವ ಕಾರಣ ತೀಸ್ತಾ ನದಿಯ ಮೇಲಿನ ಸಿಂಗ್‌ತಮ್ ಕಾಲು ಸೇತುವೆ ಕುಸಿದಿದೆ. ಪಶ್ಚಿಮ ಬಂಗಾಳದ ಜಲ್ಪೈಗುರಿ ಆಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ನದಿಯ ಕೆಳಗಿನ ಜಲಾನಯನ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ.
ಘಟನೆಗೆ ಸಂಬಂಧಿಸಿ ಸಿಕ್ಕಿಂ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ತೀಸ್ತಾ ನದಿಯಿಂದ ದೂರ ಉಳಿಯುವಂತೆ ಜನರನ್ನು ಜನರಿಗೆ ಎಚ್ಚರಿಕೆ ನೀಡಿದೆ.
#WATCH : Cloudburst in North Sikkim
At least 23 Indian Army personnel missing in flash floods in Sikkim, search operations on.
Praying for everyone’s safety 📷 #Sikkim #SikkimCloudbrust #SikkimFlashFlood #IndianArmy #ClimateCrisis #ClimateEmergency #India pic.twitter.com/uiHkwy0Y5Q— upuknews (@upuknews1) October 4, 2023
PHOTOS | 23 Army personnel reported missing after
a flash flood occurred in the Teesta River in Lachen Valley due to sudden cloud burst over Lhonak Lake in North Sikkim. More details are awaited.(Source: Third Party) pic.twitter.com/J2VjasHcyn
— Press Trust of India (@PTI_News) October 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.