ಐತಿಹಾಸಿಕ ಕ್ಷಣ: ನಮೀಬಿಯಾದಿಂದ ಭಾರತಕ್ಕೆ ಬಂದಿಳಿದ ಎಂಟು ಚೀತಾಗಳು
Team Udayavani, Sep 17, 2022, 9:19 AM IST
ಗ್ವಾಲಿಯರ್: ಭಾರತದ ಕಾಡುಗಳಿಂದ ಕಣ್ಮರೆಯಾಗಿದ್ದ ಚೀತಾಗಳು ಸುಮಾರು 70 ವರ್ಷಗಳ ಬಳಿಕ ಮತ್ತೆ ಬಂದಿದೆ. ನಮೀಬಿಯಾ ದೇಶದಿಂದ ಎಂಟು ಚೀತಾಗಳು ವಿಶೇಷ ವಿಮಾನದಲ್ಲಿ ಭಾರತಕ್ಕೆ ಆಗಮಿಸಿದೆ.
ನಮೀಬಿಯಾದಿಂದ 8 ಚೀತಾಗಳನ್ನು ಹೊತ್ತ ವಿಶೇಷ ಚಾರ್ಟರ್ಡ್ ಕಾರ್ಗೋ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿರುವ ಭಾರತೀಯ ವಾಯುಪಡೆಯ ನಿಲ್ದಾಣಕ್ಕೆ ಇಂದು ಬೆಳಗ್ಗೆ ಬಂದಿಳಿಯಿತು.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಜನ್ಮದಿನದಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚೀತಾಗಳನ್ನು ಬಿಡುಗಡೆ ಮಾಡಲಿದ್ದಾರೆ.
ಇದನ್ನೂ ಓದಿ:ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ : ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶುಕ್ರವಾರ ಮಾತನಾಡಿ, ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಚೀತಾಗಳನ್ನು ಮರು-ಪರಿಚಯಿಸಿದ್ದು, ಈ ದಶಕದಲ್ಲಿ ವನ್ಯಜೀವಿಗಳ ಅತಿದೊಡ್ಡ ಘಟನೆ ಎಂದು ಬಣ್ಣಿಸಿದ್ದಾರೆ.
“ನಮೀಬಿಯಾದಿಂದ ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಬರುತ್ತಿವೆ ಎಂಬುದಕ್ಕಿಂತ ಮಧ್ಯಪ್ರದೇಶಕ್ಕೆ ದೊಡ್ಡ ಕೊಡುಗೆ ಇಲ್ಲ. ಅಳಿದು ಹೋದ ಚೀತಾಗಳನ್ನು ಮತ್ತೆ ಪರಿಚಯಿಸುವ ಇದು ಐತಿಹಾಸಿಕ ಹೆಜ್ಜೆಯಾಗಿದೆ. ಇದು ಈ ಶತಮಾನದ ಅತಿದೊಡ್ಡ ವನ್ಯಜೀವಿ ಘಟನೆಯಾಗಿದೆ. ಇದು ಮಧ್ಯಪ್ರದೇಶದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಬೂಸ್ಟ್ ನೀಡಲಿದೆ” ಎಂದು ಚೌಹಾಣ್ ಹೇಳಿದರು.
#WATCH | The special chartered cargo flight, carrying 8 cheetahs from Namibia, landed at the Indian Air Force Station in Gwalior, Madhya Pradesh. pic.twitter.com/xFmWod7uG5
— ANI (@ANI) September 17, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.