Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Team Udayavani, Jan 3, 2025, 10:24 AM IST
ನವದೆಹಲಿ: ಉತ್ತರ ಭಾರತದ ವಿವಿಧ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸಿರುವ ಪರಿಣಾಮ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಶೀತದ ಅಲೆ ಆರ್ಭಟ ಹೆಚ್ಚಾಗಿದ್ದು, ಸುತ್ತಮುತ್ತಲ ಪ್ರದೇಶಗಳು ತೀವ್ರ ಚಳಿಯಿಂದ ಕೂಡಿದ್ದು ಜೊತೆಗೆ ದಟ್ಟ ಮಂಜಿನಿಂದ ಆವೃತಗೊಂಡಿದೆ ಇದರಿಂದ ಶೂನ್ಯ ಗೋಚರತೆ ಎದುರಾಗಿದ್ದು ವಾಹನ ಸಂಚಾರ, ರೈಲು, ವಿಮಾನ ಸಂಚಾರಗಳ ಮೇಲೆ ಪರಿಣಾಮ ಬೀರಿದೆ.
ದಟ್ಟವಾದ ಮಂಜು ಪ್ರದೇಶವನ್ನು ಆವರಿಸಿದ್ದು ಇದರಿಂದ ತಾಪಮಾನವು ಮತ್ತಷ್ಟು ಕುಸಿಯುತ್ತಿದೆ. ದೆಹಲಿಯಲ್ಲಿ, ಶುಕ್ರವಾರ ಬೆಳಿಗ್ಗೆ ಕನಿಷ್ಠ ತಾಪಮಾನವು 9.6 ° C ಇದ್ದು ಇದು ಸತತ ಐದನೇ ದಿನಕ್ಕೆ ಮುಂದುವರೆದಿದ್ದು ಇದರಿಂದ ಜನರ ದೈನಂದಿನ ಕೆಲಸ ಕಾರ್ಯಗಳ ಮೇಲೆ ಪರಿಣಾಮ ಬೀರಿದೆ.
#WATCH | Delhi: Dense fog engulfs the national capital as cold wave grips the city.
(Visuals from Akshardham) pic.twitter.com/ePXNPWLPGO
— ANI (@ANI) January 3, 2025
ವಿಮಾನ, ರೈಲು ಸಂಚಾರಗಳ ಮೇಲೆ ಪರಿಣಾಮ:
ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ, ಗೋಚರತೆ ಶೂನ್ಯಕ್ಕೆ ಕುಸಿದರೆ, ಸಫ್ದರ್‌ಜಂಗ್ ವಿಮಾನ ನಿಲ್ದಾಣವು 50 ಮೀಟರ್ ಗೋಚರತೆಯನ್ನು ವರದಿ ಮಾಡಿದೆ. ಪರಿಣಾಮ ವಿಮಾನ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಬಹುದು ಹಾಗಾಗಿ ಪ್ರಯಾಣಿಕರು ಸಂಬಂಧಿಸಿದ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ವಿನಂತಿಸಿದೆ.
ರೈಲು ಸಂಚಾರದಲ್ಲೂ ಸಮಯ ವ್ಯತ್ಯಯವಾಗುವ ಸಂಭವವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ, ಶೂನ್ಯ ಗೋಚರತೆ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ವಿಳಂಬವಾಗಲಿದೆ ಜೊತೆಗೆ ಕೆಲ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.
ದಟ್ಟ ಮಂಜಿನ ಪರಿಸ್ಥಿತಿಗಳಿಂದಾಗಿ ದೆಹಲಿಯಿಂದ ಹೊರಡುವ ಕನಿಷ್ಠ 24 ರೈಲುಗಳ ಸಂಚಾರದಲ್ಲಿ ವಿಳಂಬವಾಗಿವೆ. ಅಯೋಧ್ಯೆ ಎಕ್ಸ್‌ಪ್ರೆಸ್ ರೈಲು ನಾಲ್ಕು ಗಂಟೆ ವಿಳಂಬವಾಗಿ ಸಂಚಾರ ನಡೆಸಲಿದೆ, ಗೋರಖ್‌ಧಾಮ್ ಎಕ್ಸ್‌ಪ್ರೆಸ್ ಎರಡು ಗಂಟೆ ತಡವಾಗಿ ಒಡಲಿದೆ ಮತ್ತು ಬಿಹಾರ ಕ್ರಾಂತಿ ಎಕ್ಸ್‌ಪ್ರೆಸ್ ಮತ್ತು ಶ್ರಮ ಶಕ್ತಿ ಎಕ್ಸ್‌ಪ್ರೆಸ್ ಮೂರು ಗಂಟೆಗಳಿಗೂ ಹೆಚ್ಚು ವಿಳಂಬವಾಗಿ ಸಂಚರಿಸಲಿದೆ.
ಇದನ್ನೂ ಓದಿ: Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.