ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ
Team Udayavani, Oct 20, 2021, 8:11 AM IST
ಡೆಹರಾಡೂನ್ : ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ಜನರ ಜೀವನ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಈವರೆಗೆ 34 ಮಂದಿ ಸಾವನ್ನಪ್ಪಿದ್ದು, ಗುಡ್ಡಗಳಿಂದ ಆವೃತವಾದ ರಾಜ್ಯದಲ್ಲಿ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ.
ಮಳೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಮೋದಿ ಮತ್ತು ಗೃಹ ಸಚಿವರಿಗೆ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲಾಗಿದೆ. ಮನೆ, ಸೇತುವೆಗಳು ಹಾನಿಗೊಳಗಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ಮೂರು ಸೇನಾ ಹೆಲಿಕಾಪ್ಟರ್ ಗಳನ್ನು ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಮಾಹಿತಿ ನೀಡಿದ್ದಾರೆ.
ಮಳೆ ಮತ್ತು ಪ್ರವಾಹದಿಂದ “ಇಲ್ಲಿಯವರೆಗೆ 34 ಜನರು ಸಾವನ್ನಪ್ಪಿದ್ದಾರೆ ಮತ್ತು ಐವರು ನಾಪತ್ತೆಯಾಗಿದ್ದಾರೆ. ಮೃತರ ಕುಟುಂಬಗಳಿಗೆ 4 ರೂ. ಲಕ್ಷ ಪರಿಹಾರ ನೀಡಲಾಗುವುದು. ಮನೆ ಕಳೆದುಕೊಂಡವರಿಗೆ ₹ 1.9 ಲಕ್ಷ ನೀಡಲಾಗುವುದು. ಜಾನುವಾರುಗಳನ್ನು ಕಳೆದುಕೊಂಡವರಿಗೆ ಎಲ್ಲಾ ರೀತಿಯ ಸಹಾಯವನ್ನು ನೀಡಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.
ಇನ್ನು ಮಂಗಳವಾರ ನೈನಿತಾಲ್ ಜಿಲ್ಲೆಯಲ್ಲಿ ರಾಮಗಡದ ಗ್ರಾಮವೊಂದರಲ್ಲಿ ಭಾರಿ ಮಳೆಯ ನಡುವೆ ಮೇಘಸ್ಫೋಟ ಸಂಭವಿಸಿದ್ದು, ಅನೇಕರು ಗಾಯಗೊಂಡಿದ್ದಾರೆ. ಪೊಲೀಸರು ಹಾಗೂ ಅಧಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿದೆ. ಗಾಯಾಳು ಜನರನ್ನು ರಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.