ಚುನಾವಣೆ ವೆಚ್ಚ: ಗರಿಷ್ಠ ನಗದು ಪಾವತಿ 2 ಸಾವಿರ ರೂ.ಗೆ ಇಳಿಸಲು ಪ್ರಸ್ತಾಪ
Team Udayavani, Nov 7, 2022, 7:10 AM IST
ನವದೆಹಲಿ: ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಚುನಾವಣೆ ಪ್ರಚಾರದ ವೆಚ್ಚವಾಗಿ ಗರಿಷ್ಠ ನಗದು ಪಾವತಿಯನ್ನು ಈಗಿರುವ 10 ಸಾವಿರ ರೂ.ಗಳಿಂದ 2 ಸಾವಿರ ರೂಪಾಯಿಗಳಿಗೆ ಇಳಿಸುವಂತೆ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ಪ್ರಸ್ತಾಪ ಸಲ್ಲಿಸಿದೆ.
ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ವ್ಯಕ್ತಿ ಅಥವಾ ಘಟಕವು ಮಾಡುವ 2 ಸಾವಿರ ರೂ.ಗಿಂತ ಹೆಚ್ಚಿನ ಎಲ್ಲಾ ಪಾವತಿಗಳನ್ನು ಚೆಕ್ ಅಥವಾ ಆನ್ಲೈನ್, ಡಿಜಿಟಲ್ ವಿಧಾನಗಳ ಮೂಲಕ ಪಾವತಿ ಮಾಡಲಾಗುತ್ತದೆ ಎಂಬುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಚುನಾವಣಾ ನಿಯಮಗಳಿಗೆ ತಿದ್ದುಪಡಿ ತರಬೇಕು ಎಂದು ಕೇಂದ್ರಕ್ಕೆ ಚುನಾವಣಾ ಆಯೋಗ ಪ್ರಸ್ತಾಪಿಸಿದೆ.
ಇದು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ವೆಚ್ಚದಲ್ಲಿ ಹೆಚ್ಚು ಪಾರದರ್ಶಕತೆ ತರಲು ಹಾಗೂ ಅಕ್ರಮಗಳನ್ನು ತಡೆಗಟ್ಟಲು ಈ ಕ್ರಮ ಅಗತ್ಯವಿದೆ ಎಂದು ಚುನಾವಣಾ ಆಯೋಗ ಪ್ರತಿಪಾದಿಸಿದೆ. ಪ್ರಸ್ತುತ ನಗದು ರೂಪದಲ್ಲಿ ಅಭ್ಯರ್ಥಿಯು ಪ್ರಚಾರದ ವೆಚ್ಚವಾಗಿ ಗರಿಷ್ಠ 10 ಸಾವಿರ ರೂ. ಪಾವತಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.