ಮಾರ್ಗಸೂಚಿ ಅನ್ವಯ ದಯಾಮರಣ, ಲಿವಿಂಗ್ ವಿಲ್ ಗೆ ಸುಪ್ರೀಂಕೋರ್ಟ್ ಅಸ್ತು


Team Udayavani, Mar 9, 2018, 3:04 PM IST

passive-euthanasia.jpg

ನವದೆಹಲಿ:ಮನುಷ್ಯನಿಗೆ ಗೌರವಯುತವಾಗಿ ಸಾಯುವ ಹಕ್ಕು ಇದೆ ಎಂದು ಹೇಳಿರುವ ಸುಪ್ರೀಂಕೋರ್ಟ್ ಲಿವಿಂಗ್‌ ವಿಲ್‌ ಹಾಗೂ ಇಚ್ಚಾ ಅಥವಾ ದಯಾಮರಣಕ್ಕೆ ಗ್ರೀನ್ ಸಿಗ್ನಲ್ ನೀಡುವ ಮೂಲಕ ಐತಿಹಾಸಿಕ ತೀರ್ಪು ನೀಡಿದೆ. ಆದರೆ ವೈದ್ಯಕೀಯ ಮಂಡಳಿಯ ಮಾರ್ಗಸೂಚಿ ದೃಢಿಕರಿಸಿದ ನಂತರವಷ್ಟೇ ದಯಾಮರಣ ಕಾರ್ಯಗತವಾಗಲಿದೆ ಎಂದು ಸ್ಪಷ್ಟಪಡಿಸಿದೆ.

ಮರಣಶಯ್ಯೆಯಲ್ಲಿರುವ ವ್ಯಕ್ತಿಗೆ ಗೌರವಯುತವಾಗಿ ಸಾಯುವ ಹಕ್ಕು ಹೊಂದಿದ್ದು, ಗುಣಪಡಿಸಲಾರದ ಮಾರಣಾಂತಿಕ ಕಾಯಿಲೆ ಅಥವಾ ಲೈಫ್ ಸರ್ಪೋರ್ಟ್ ನಲ್ಲಿ ಇರುವ ವ್ಯಕ್ತಿ ಮಾರ್ಗಸೂಚಿ ಅನ್ವಯ ದಯಾಮರಣಕ್ಕೆ ಅನುಮತಿ ನೀಡಬಹುದು ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಸೇರಿದಂತೆ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠ ಈ ಮಹತ್ವದ ತೀರ್ಪು ನೀಡಿದೆ.

ದಯಾಮರಣಕ್ಕೆ ಸಂಬಂಧಿಸಿದಂತೆ ಯಾರು ಮತ್ತು ಹೇಗೆ ಕಾರ್ಯಗತಗೊಳಿಸಬೇಕೆಂಬುದನ್ನು ವೈದ್ಯಕೀಯ ಮಂಡಳಿ ಅನುಮತಿ ನೀಡಬೇಕಾಗುತ್ತದೆ. ಈ ಇಚ್ಛಾಮರಣದ ವಿಷಯದಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿಯ ಕಾನೂನು ರೂಪಿಸಬೇಕೆಂದು ಸೂಚಿಸಿದೆ.

ವಾಸಿಯಾಗದ ಕಾಯಿಲೆಯ ರೋಗಿಯೊಬ್ಬರು ತನಗೆ ಲೈಫ್ ಸಪೋರ್ಟ್ ಬೇಡ ಎಂದು ನಿರಾಕರಿಸುವ ಹಕ್ಕನ್ನು ನೀಡಬಹುದು ಎಂದು ಪೀಠ ತಿಳಿಸಿದೆ. ಒಂದು ವೇಳೆ ದಯಾಮರಣದ ಇಚ್ಛೆ ವ್ಯಕ್ತಪಡಿಸಿದ್ದಲ್ಲಿ ಕುಟುಂಬದ ಸದಸ್ಯರು ಅಥವಾ ಸ್ನೇಹಿತ ಹೈಕೋರ್ಟ್ ಮೆಟ್ಟಿಲೇರಬಹುದು. ಆಗ ದಯಾಮರಣದ ಅವಶ್ಯಕತೆ ಇದೆಯಾ ಎಂದು ವೈದ್ಯಕೀಯ ಮಂಡಳಿಯ ಪ್ರಮಾಣಪತ್ರದ ಮೇಲೆ ನಿರ್ಧಾರ ಕೈಗೊಳ್ಳಬಹುದಾಗಿದೆ ಎಂಬುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಗುರುತರ ಕಾಯಿಲೆಯಿಂದ ಬಳಲುತ್ತಿರುವವರು ಚಿಕಿತ್ಸೆ ಸ್ಥಗಿತಗೊಳಿಸುವ ಬಗ್ಗೆ ಬರೆದಿಟ್ಟ ದಾಖಲೆ (ಲಿವಿಂಗ್‌ ವಿಲ್‌) ಪರಿಗಣಿಸಬೇಕೇ,ಬೇಡವೇ ಎಂಬ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಶುಕ್ರವಾರ ತೀರ್ಪು ನೀಡಿದೆ. ಈ ಬಗ್ಗೆ ಕಳೆದ ವರ್ಷದ ಅ.11ರಂದು ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು. 2011ರಲ್ಲಿ ಅರುಣಾ ಶಾನ್‌ಭಾಗ್‌ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಆಂಶಿಕ ದಯಾಮರಣಕ್ಕೆ ಅನುಮೋದನೆ ನೀಡಿತ್ತು.

ಟಾಪ್ ನ್ಯೂಸ್

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

Jammu-Vaishnodevi

Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.