2021ರ ಗಣತಿಯಲ್ಲಿ ಒಬಿಸಿ ಮಾಹಿತಿ ಸಂಗ್ರಹ
Team Udayavani, Sep 1, 2018, 6:00 AM IST
ನವದೆಹಲಿ: ಇದೇ ಮೊದಲ ಬಾರಿಗೆ ಇತರೆ ಹಿಂದುಳಿದ ಜಾತಿ (ಒಬಿಸಿ)ಗಳ ಗಣತಿಯನ್ನು 2021ರ ಜನಗಣತಿಯಲ್ಲಿ ನಡೆಸಲಾಗುತ್ತದೆ ಎಂದು ಕೇಂದ್ರ ಗೃಹ ಇಲಾಖೆ ಶುಕ್ರವಾರ ಸ್ಪಷ್ಟಪಡಿಸಿದೆ. 2019ರ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವು ಮಹತ್ವ ಪಡೆದಿದೆ. ಹಲವು ಒಬಿಸಿ ಸಮುದಾಯಗಳು ದೀರ್ಘಕಾಲದಿಂದ ಇಂಥದ್ದೊಂದು ಬೇಡಿಕೆ ಇಡುತ್ತಲೇ ಬಂದಿವೆ.
ಈ ಕುರಿತು ಮಾಹಿತಿ ನೀಡಿರುವ ಗೃಹ ಇಲಾಖೆ ವಕ್ತಾರರು, ಮುಂದಿನ ಜನಗಣತಿಯ ಬಗ್ಗೆ ಮೂರು ವರ್ಷಗಳಲ್ಲಿ ರೂಪುರೇಷೆಗಳನ್ನು ಅಂತಿಮ ಪಡಿಸಲಾಗುತ್ತದೆ. ಜತೆಗೆ ಮಾಹಿತಿ ಸಂಗ್ರಹಿಸಿ ಕ್ಷಿಪ್ರವಾಗಿ ಅದನ್ನು ಕ್ರೋಡೀಕರಿಸುವ ಕ್ರಮಗಳ ಬಗ್ಗೆಯೂ ಚರ್ಚಿಸಲಾಗಿದೆ ಎಂದಿದ್ದಾರೆ. 1931ರ ಗಣತಿ ಆಧರಿಸಿ ಮಂಡಲ್ ಆಯೋಗ ನೀಡಿದ್ದ ಶಿಫಾರಸಿನಲ್ಲಿ ಒಬಿಸಿಗಳಿಗೆ ಶೇ.27ರಷ್ಟು ಮೀಸಲಾತಿಯನ್ನು ವಿ.ಪಿ.ಸಿಂಗ್ ಸರ್ಕಾರ ಘೋಷಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.