ಮೊದಲ ತ್ತೈಮಾಸಿಕದಲ್ಲಿ ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿ
Team Udayavani, Aug 26, 2022, 6:30 AM IST
ನವದೆಹಲಿ: ಕೊರೊನಾ ನಂತರದ ಆರ್ಥಿಕ ಚೇತರಿಕೆಗೆ ಪುಷ್ಟಿ ನೀಡುವಂತೆ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ ಔಪಚಾರಿಕ ಉದ್ಯೋಗ ಸೃಷ್ಟಿಯು ಗಣನೀಯವಾಗಿ ಏರಿಕೆಯಾಗಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ದತ್ತಾಂಶವೇ ಈ ಮಾಹಿತಿ ನೀಡಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಮೊದಲ ತ್ತೈಮಾಸಿಕದಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್ಒ)ಯ ಚಂದಾದಾರರ ಪ್ರಮಾಣ ಶೇ.40.05ರಷ್ಟು ಹೆಚ್ಚಳವಾಗಿದೆ. ಜೂನ್ ತಿಂಗಳೊಂದರಲ್ಲೇ ಇದು ಶೇ.30.05ರಷ್ಟು ಏರಿಕೆ ಕಂಡಿದೆ.
ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ಜೂನ್ಗೆ ಅಂತ್ಯವಾದ ತ್ತೈಮಾಸಿಕದಲ್ಲಿ ಔಪಚಾರಿಕ ಉದ್ಯೋಗಿಗಳ ಪ್ರಮಾಣ ಶೇ.51 ಏರಿಕೆಯಾಗಿದೆ. ಜೂನ್ವೊಂದರಲ್ಲೇ ಇದು ಶೇ.48.6ರಷ್ಟು ಹೆಚ್ಚಳವಾಗಿದೆ ಎಂದೂ ಸಚಿವಾಲಯದ ಅಂಕಿಅಂಶ ತಿಳಿಸಿದೆ.
ಇದೇ ವೇಳೆ, ಉದ್ಯೋಗಿಗಳ ರಾಜ್ಯ ವಿಮಾ ನಿಗಮದ ಚಂದಾದಾರರ ಸಂಖ್ಯೆ ಮೊದಲ ತ್ತೈಮಾಸಿಕದಲ್ಲಿ ಶೇ.45ರಷ್ಟು ಹೆಚ್ಚಳವಾಗಿದೆ. ಆದರೆ, ರಾಷ್ಟ್ರೀಯ ಪಿಂಚಣಿ ಯೋಜನೆಯ ಚಂದಾದಾರರ ಪ್ರಮಾಣ ಮೊದಲ ತ್ತೈಮಾಸಿಕದಲ್ಲಿ ಶೇ.0.4ರಷ್ಟು ಇಳಿಕೆಯಾಗಿದೆ ಎಂದೂ ದತ್ತಾಂಶ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.