ಡೇಟಾ ರಕ್ಷಣೆಗೆ ಸಮಿತಿ ರಚನೆ: ಸುಪ್ರೀಂಗೆ ಕೇಂದ್ರ
Team Udayavani, Sep 7, 2017, 7:25 AM IST
ನವದೆಹಲಿ: ವಾಟ್ಸ್ಆ್ಯಪ್ ಮಾಹಿತಿ ಹಂಚಿಕೆ ಸಂಬಂಧ ಪರಿಶೀಲನೆ ನಡೆಸಲು ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ದೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಹೇಳಿದೆ. ವಾಟ್ಸ್ ಆ್ಯಪ್ನ ಮಾಹಿತಿ ಹಂಚಿಕೆ ಸಂಬಂಧ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ನ ಐದು ನ್ಯಾಯಮೂರ್ತಿ ಗಳನ್ನೊಳಗೊಂಡ ಸಂವಿಧಾನ ಪೀಠಕ್ಕೆ ಸರ್ಕಾರ ಅರಿಕೆ ಮಾಡಿಕೊಂಡಿದ್ದು, ಈ ಸಮಿತಿ ವರದಿ ನೀಡಿದ ಮೇಲೆ ಕಾನೂನು ಜಾರಿಗೆ ತರುತ್ತೇವೆ ಎಂದು ಹೇಳಿದೆ.
ಮುಖ್ಯ ನ್ಯಾ.ದೀಪಕ್ ಮಿಶ್ರಾ ನೇತೃತ್ವದಲ್ಲಿ ಮಾಹಿತಿ ರಕ್ಷಣೆ ಸಂಬಂಧ ವಿಚಾರಣೆ ನಡೆಯುತ್ತಿದೆ. ವಾಟ್ಸ್ಆ್ಯಪ್, ಫೇಸ್ಬುಕ್ ಗ್ರಾಹಕರ ಮಾಹಿತಿಯನ್ನು ಪರಸ್ಪರ ಹಂಚಕೆ ಮಾಡಿಕೊಳ್ಳುವ ಬಗ್ಗೆ ನಿರ್ಧರಿಸಿದ್ದು, ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಇದರಿಂದ ಜನರ ಖಾಸಗಿತನಕ್ಕೆ ಧಕ್ಕೆಯಾಗಲಿದೆ ಎಂಬುದು ಅರ್ಜಿದಾರರ ಅಳಲು. ಹೀಗಾಗಿ ಸಂವಿಧಾನ ಪೀಠ ಈ ಬಗ್ಗೆ ವಿಚಾರಣೆ ನಡೆಸಿದ್ದು, ಜನರ ಖಾಸಗಿತನ ರಕ್ಷಣೆಗೆ ಕೇಂದ್ರ ಯಾವ ಕ್ರಮ ತೆಗೆದುಕೊಂಡಿದೆ ಎಂಬ ಬಗ್ಗೆ ಕೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.