ಚಲಿಸುತ್ತಿದ್ದ ರೈಲಿನಲ್ಲಿ ಮಾಜಿ ಬಿಜೆಪಿ ಶಾಸಕನ ಬರ್ಬರ ಹತ್ಯೆ
Team Udayavani, Jan 8, 2019, 5:14 AM IST
ಅಹಮದಾಬಾದ್: ಗುಜಾರಾತ್ನ ಮಾಜಿ ಬಿಜೆಪಿ ಶಾಸಕ ಜಯಂತಿಲಾಲ್ ಭಾನುಶಾಲಿ ಅವರನ್ನು ಸೋಮವಾರ ರಾತ್ರಿ ಚಲಿಸುತ್ತಿರುವ ರೈಲಿನಲ್ಲೇ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ. ಭುಜ್ ನಿಂದ ಅಹಮದಾಬಾದ್ಗೆ ಸಂಚರಿಸುತ್ತಿದ್ದ ಸಯಾಜಿ ನಗರ್ ಎಕ್ಸ್ಪ್ರೆಸ್ ರೈಲಿನಲ್ಲಿ ಈ ಹತ್ಯೆ ನಡೆದಿದೆ.
ಕಟಾರಿಯಾ ಮತ್ತು ಸುರ್ಬಾರಿ ನಿಲ್ದಾಣಗಳ ಮಧ್ಯೆ ಎಸಿ ಪ್ರಥಮ ದರ್ಜೆಯಲ್ಲಿ ಪ್ರಯಾಣಿಸುತ್ತಿದ್ದ ಭಾನುಶಾಲಿ ಅವರನ್ನು ಹತ್ಯೆಗೈಯಲಾಗಿದೆ. ಒಂದು ಗುಂಡು ಎದೆಗೆ ಹೊಕ್ಕಿದ್ದರೆ ,ಇನ್ನೊಂದು ಕಣ್ಣನ್ನು ಸೀಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಳಿಕ ರೈಲನ್ನು 2 ಗಂಟೆಗೂ ಹೆಚ್ಚು ಕಾಲ ಮಾಲಿಯಾ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ.
ಕಳೆದ ವರ್ಷ ಮಹಿಳೆಯೊಬ್ಬರು ಭಾನುಶಾಲಿ ಅವರ ವಿರುದ್ಧ ಮಹಿಳೆಯೊಬ್ಬರು ರೇಪ್ ಆರೋಪ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.