CM residence ತೊರೆದ ಕೇಜ್ರಿವಾಲ್: ಕಣ್ಣೀರಿಟ್ಟು ಬೀಳ್ಕೊಟ್ಟ ಸಿಬಂದಿಗಳು Watch video
Team Udayavani, Oct 4, 2024, 5:26 PM IST
ಹೊಸದಿಲ್ಲಿ: ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ(ಅ4) ದೆಹಲಿ 6, ಫ್ಲಾಗ್‌ಸ್ಟಾಫ್ ರಸ್ತೆಯ ಸಿಎಂ ನಿವಾಸವನ್ನು ಕುಟುಂಬ ಸದಸ್ಯರೊಂದಿಗೆ ತೊರೆದರು. ಈ ವೇಳೆ ನಿವಾಸದ ಸಿಬಂದಿಗಳಿಗೆ ಧನ್ಯವಾದಗಳನ್ನು ಹೇಳಿದರು. ಕೆಲವರು ಭಾವುಕ ಕ್ಷಣಕ್ಕೆ ಸಾಕ್ಷಿ ಎಂಬಂತೆ ಕಣ್ಣೀರಿಟ್ಟರು. ಮಾಜಿ ಸಿಎಂ ಸಾಮಾನ್ಯ ಕೆಲಸಗಾರರೊಬ್ಬರನ್ನು ಅಪ್ಪಿಕೊಂಡು ನಿವಾಸ ತೊರೆದು ಗಮನ ಸೆಳೆದರು.
ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಒಂಬತ್ತು ವರ್ಷಗಳಿಂದ ಇದ್ದ ಮನೆಯನ್ನು ಪತ್ನಿ, ಮಗ, ಮಗಳು ಮತ್ತು ತಂದೆ, ತಾಯಿಯೊಂದಿಗೆ ತೊರೆದು ಎರಡು ಕಾರುಗಳಲ್ಲಿ 5, ಫಿರೋಜ್‌ಶಾ ರಸ್ತೆ ಮಂಡಿ ಹೌಸ್ ಗೆ ಹೊರಟರು. ಮಂಡಿ ಹೌಸ್ ಬಂಗಲೆಯನ್ನು ಪಂಜಾಬ್‌ನ ಎಎಪಿಯ ರಾಜ್ಯಸಭಾ ಸಂಸದ ಅಶೋಕ್ ಮಿತ್ತಲ್ ಅವರಿಗೆ ನೀಡಲಾಗಿತ್ತು.
ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಆಸ್ತಿಯ ಕೀಗಳನ್ನು ಸರಕಾರಿ ಅಧಿಕಾರಿಗೆ ಹಸ್ತಾಂತರಿಸಿದರು.6, ಫ್ಲಾಗ್‌ಸ್ಟಾಫ್ ಬಂಗಲೆಯು ದೆಹಲಿ ಸರಕಾರದ ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿದೆ. ಕೇಜ್ರಿವಾಲ್ ಕುಟುಂಬ ಈ ಮನೆಗೆ ‘ಗೃಹ ಪ್ರವೇಶ’ ಆಚರಣೆ ಮಾಡುವ ಮೂಲಕ ಪ್ರವೇಶಿಸಿದ್ದರು.
#WATCH | Delhi: Former Delhi CM and AAP National Convenor Arvind Kejriwal vacated the CM residence along with his family, earlier today.
(Source: AAP) pic.twitter.com/vQEy61Bjm8
— ANI (@ANI) October 4, 2024
ಎರಡು ಮಿನಿ ಟ್ರಕ್‌ಗಳಲ್ಲಿ ಕುಟುಂಬದ ಗೃಹೋಪಯೋಗಿ ವಸ್ತುಗಳನ್ನು 5, ಫಿರೋಜ್‌ಶಾ ರಸ್ತೆ ಬಂಗಲೆಗೆ ಸಾಗಿಸಲಾಗಿದೆ ಎಂದು ಎಎಪಿ ಮುಖಂಡರು ತಿಳಿಸಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ದೆಹಲಿಯ ಜನರಿಂದ “ಪ್ರಾಮಾಣಿಕತೆಯ ಪ್ರಮಾಣಪತ್ರ” ಪಡೆದ ನಂತರವೇ ಮತ್ತೆ ಹುದ್ದೆಯನ್ನು ಅಲಂಕರಿಸುವುದಾಗಿ ಕೇಜ್ರಿವಾಲ್ ಕಳೆದ ತಿಂಗಳು ಘೋಷಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Weightlifting: ಏಷ್ಯನ್ ವೇಟ್ ಲಿಫ್ಟಿಂಗ್; ಭಾರತಕ್ಕೆ ಎರಡು ಬೆಳ್ಳಿ
Junior World Cup shooting: ಭಾರತದ ಆತಿಥ್ಯದಲ್ಲಿ ಜೂ. ವಿಶ್ವಕಪ್ ಶೂಟಿಂಗ್
Udupi: ಕುದ್ರು ನೆಸ್ಟ್ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.