![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 7, 2022, 4:24 PM IST
ಪಣಜಿ: ನಾನು ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಸ್ಫರ್ಧಿಸದಂತೆ ತಡೆಯಲು ಬಿಜೆಪಿ ಮತ್ತು ದೇವೇಂದ್ರ ಫಡ್ನವೀಸ್ ರವರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ ನಾನು ಜನರಿಗಾಗಿ ಕೆಲಸ ಮಾಡಬೇಕೆಂದು ಮನಸ್ಸು ಬದಲಾಯಿಸಲಿಲ್ಲ. ಇದರಿಂದಾಗಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಫರ್ಧಿಸಿದ್ದೇನೆ ಎಂದು ಮಾಂದ್ರೇ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹಾಗೂ ಗೋವಾದ ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪಾರ್ಸೇಕರ್ ಹೇಳಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು-ಸಮಯ ಬಂದಾಗ ಫಡ್ನವಿಸ್ ಭವಿಷ್ಯ ಎಷ್ಟು ತಪ್ಪಾಗಿದೆ ಎಂಬುದು ಎಲ್ಲರಿಗೂ ಗೊತ್ತಾಗಲಿದೆ. ಮಾರ್ಚ 10 ರ ವರೆಗೆ ಕಾಯಬೇಕಷ್ಟೆ. ನಾನು ಪ್ರಸಕ್ತ ಚುನಾವಣೆಯಲ್ಲಿ ಸೋಲುತ್ತೇನೆ ಎಂದು ದೇವೇಂದ್ರ ಫಡ್ನವೀಸ್ ಜನರ ದಾರಿ ತಪ್ಪಿಸುತ್ತಿದ್ದಾರೆ. ಎಂದು ಲಕ್ಷ್ಮೀಕಾಂತ ಪಾರ್ಸೇಕರ್ ಹೇಳಿದರು.
ನಾನು ಮಾಂದ್ರೆ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯ ಕೈಗೊಂಡಿದ್ದೇನೆ. ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಪಕ್ಷದಿಂದ ಜನತೆ ಕಷ್ಟಪಡುವಂತಾಯಿತು. ಆದರೆ ಇದೀಗ ಶೀಘ್ರದಲ್ಲಿಯೇ ಈ ಕಷ್ಟ ದೂರವಾಗಲಿದೆ ಎಂದು ಲಕ್ಷ್ಮೀಕಾಂತ ಪಾರ್ಸೇಕರ್ ಹೇಳಿದರು.
ಗೋವಾ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಬಿಜೆಪಿ ಟಿಕೆಟ್ ಲಭಿಸದ ಕಾರಣ ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪಾರ್ಸೇಕರ್ ಮಾಂದ್ರೆ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಪಕ್ಷೇತರರಾಗಿ ಸ್ಫರ್ಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಲಕ್ಷ್ಮೀಕಾಂತ ಪಾರ್ಸೇಕರ್ ಬಿಜೆಪಿಗೆ ನೇರ ಸ್ಫರ್ಧೆಯೊಡ್ಡಿದ್ದಾರೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.