Uddhav Thackeray: ಮಾಜಿ ಸಿಎಂ, ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಆಸ್ಪತ್ರೆಗೆ ದಾಖಲು
Team Udayavani, Oct 14, 2024, 4:46 PM IST
ಮಹಾರಾಷ್ಟ್ರ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು(ಅ.14) ಬೆಳಿಗ್ಗೆ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಂಜಿಯೋಪ್ಲ್ಯಾಸ್ಟಿ ಪ್ರಕ್ರಿಯೆಗಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಪುತ್ರ ಆದಿತ್ಯ ಠಾಕ್ರೆ ಮಾಹಿತಿ ಹಂಚಿಕೊಂಡಿದ್ದಾರೆ.
ಉದ್ಧವ್ ಠಾಕ್ರೆ ಅವರು ಶನಿವಾರದಂದು ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಭಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ ಅದೇ ದಿನ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿತ್ತು. ಇಂದು ಬೆಳಿಗ್ಗೆ ಉಸಿರಾಟದ ಸಮಸ್ಯೆ ಕಂಡುಬಂದ ನಿಟ್ಟಿನಲ್ಲಿ ಕೂಡಲೇ ಅವರನ್ನು ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು:
ಉದ್ಧವ್ ಠಾಕ್ರೆ ಅವರು ಈ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ವೇಳೆ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು ಎಂದು ಕುಟುಂಬ ಮೂಲಗಳು ತಿಳಿಸಿದ್ದು ಇಂದು ಕೂಡ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ತಪಾಸಣೆ ನಡೆಸಿದ ವೈದ್ಯರು ಆಂಜಿಯೋಪ್ಲಾಸ್ಟಿ ಮಾಡಿದ್ದಾರೆ. ಸದ್ಯ ಠಾಕ್ರೆ ಅವರ ಅರೋಗ್ಯ ಸ್ಥಿರವಾಗಿದ್ದು ನಾಳೆ(ಅ.15) ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Rain Alert: ತಮಿಳುನಾಡಿನ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಅ.15ರಂದು ರಜೆ… ಸಿಎಂ ಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.