ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ಗೆ ಕೋವಿಡ್ ಪಾಸಿಟಿವ್ ದೃಢ
Team Udayavani, Apr 19, 2021, 7:39 PM IST
ನವದೆಹಲಿ: ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದೆ.
ಸೋಮವಾರ ಮನಮೋಹನ್ ಸಿಂಗ್ ಅವರಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆಗೊಳಪಡಿಸಿದಾಗ ಪಾಸಿಟವ್ ಸೋಂಕು ತಗುಲಿರುವುದು ದೃಢ ಪಟ್ಟಿದೆ ಎಂದು ವರದಿಗಳು ತಿಳಿಸಿವೆ.
ನಿನ್ನೆಯಷ್ಟೆ ದೇಶದಲ್ಲಿ ಹಬ್ಬುತ್ತಿರುವ ಕೋವಿಡ್ ಎರಡನೇ ಅಲೆಯ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದ ಮನಮೋಹನ್ ಸಿಂಗ್ ಕೆಲವೊಂದು ಸಲಹೆ ಸೂಚನೆಗಳನ್ನು ನೀಡಿದ್ದರು. ದೇಶಾದ್ಯಂತ ಕೋವಿಡ್ ಲಸಿಕೆ ಕಾರ್ಯಕ್ರಮ, ಔಷಧಗಳ ಪೂರೈಕೆಯ ಹೆಚ್ಚಳ ಮಾಡುವಂತೆ ಹೇಳಿದ್ದರು.
‘ಭಾರತದಲ್ಲಿ ಮುಂದಿನ ಆರು ತಿಂಗಳ ಅವಧಿಯಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಮೇಲೆ ಹೆಚ್ಚಿನ ನಿಗಾ ವಹಿಸಬೇಕಿದೆ. ಪಾರದರ್ಶಕ ವಿಧಾನದಲ್ಲಿ ಕೊವಿಡ್-19 ಲಸಿಕೆ ವಿತರಣೆ ಮತ್ತು ಸರಬರಾಜು ಪ್ರಕ್ರಿಯೆಯನ್ನು ನೋಡಿಕೊಳ್ಳುವಂತೆ ಸಲಹೆ ನೀಡಿದ್ದರು.
ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾದ್ರಾ ಅವರು ಟ್ವೀಟ್ ಮಾಡಿ, ಮನಮೋಹನ್ ಸಿಂಗ್ ಅವರು ಬೇಗನೆ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಕೇಂದ್ರದ ಮಾಜಿ ಸಚಿವ ಪಿ. ಚಿದಂಬರ್ ಸಹ ಟ್ವೀಟ್ ಮಾಡಿದ್ದು, ತೀವ್ರ ಜ್ವರದಿಂದಾಗಿ ಮನಮೋಹನ್ ಸಿಂಗ್ ಅವರು ಆಸ್ಪತ್ರೆಗೆ ದಾಖಲಾಗಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಧೈರ್ಯದಿಂದ ಕೋವಿಡ್ ಎದುರಿಸಿ ಗುಣಮುಖರಾಗಿ ಹೊರಬನ್ನಿ ಎಂದು ಪ್ರಾರ್ಥಿಸುವುದಾಗಿ ಹೇಳಿಕೊಂಡಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಹ ಟ್ವೀಟ್ ಮಾಡಿದ್ದು, ಬಹುಬೇಗನೆ ಮನಮೋಹನ್ ಸಿಂಗ್ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.