ಕೇರಳ: ಸ್ಟುಡಿಯೋದಲ್ಲಿ ಮಾಜಿ ರೇಡಿಯೋ ಜಾಕಿಯ ಬರ್ಬರ ಹತ್ಯೆ
Team Udayavani, Mar 27, 2018, 10:37 AM IST
ತಿರುವನಂತಪುರ : ತಿರುವನಂತಪುರದ ಮದವೂರು ಎಂಬಲ್ಲಿನ ತನ್ನ ಸ್ಟುಡಿಯೋದಲ್ಲೇ ಸೋಮವಾರ ರಾತ್ರಿ ಮಾಜಿ ರೇಡಿಯೋ ಜಾಕಿ ರಾಜೇಶ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ.
ವೇದಿಕೆ ಕಾರ್ಯಕ್ರಮವೊಂದನ್ನು ಮುಗಿಸಿ ತನ್ನ ಸ್ನೇಹಿತನ ಜತೆಗೆ ಮರಳುತ್ತಿದ್ದ ರಾಜೇಶ್ ಮೇಲೆ ದುಷ್ಕರ್ಮಿಗಳು ಮಾರಕಾಯುಧಗಳಿಂದ ದಾಳಿ ನಡೆಸಿದರು. ದಾಳಿ ನಡೆದಿದ್ದಾಗ ರಾಜೇಶ್ ಮತ್ತು ಆತನ ಸ್ನೇಹಿತ ತಮ್ಮ ಸಲಕರಣೆಗಳನ್ನು ಸ್ಟುಡಿಯೋದಲ್ಲಿ ಇರಿಸಿದ್ದರು. ದಾಳಿಕೋರರು ಕೆಂಪು ಬಣ್ಣದ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬಂದು ಹರಿತವಾದ ಆಯುಧಗಳಿಂದ ರಾಜೇಶ್ ಮತ್ತು ಆತನ ಸ್ನೇಹಿತನ ಮೇಲೆ ದಾಳಿ ನಡೆಸಿದರು.
ದಾಳಿ ನಡೆದ ಕೂಡಲೇ ಇದನ್ನು ಗಮನಿಸಿದ ಸ್ಥಳೀಯರು ಒಡನೆಯೇ ಪೊಲೀಸರನ್ನು ಜಾಗೃತಗೊಳಿಸಿದರು. ತೀವ್ರ ಗಾಯಗೊಂಡಿದ್ದ ರಾಜೇಶ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಆತನ ಸ್ನೇಹಿತನಿಗೂ ಗಂಭೀರ ಗಾಯಗಳಾಗಿದ್ದು ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಾಜೇಶ್ ರೆಡ್ ಎಫ್ಎಂನ ರೇಡಿಯೋ ಜಾಕಿಯಾಗಿ ಅನೇಕ ವರ್ಷಗಳ ಕಾಲ ದುಡಿದಿದ್ದರು. ದೋಹಾದಲ್ಲಿನ ವಾಯ್ಸ ಆಫ್ ಕೇರಳ ಎಫ್ಎಂ ಸ್ಟೇಶನ್ನಲ್ಲೂ ರಾಜೇಶ್ ಈ ಹಿಂದೆ ದುಡಿದಿದ್ದರು. ಈಚೆಗಷ್ಟೇ ಅವರು ದೋಹಾದಿಂದ ಮರಳಿ ಸ್ಥಳೀಯ ಮಿಮಿಕ್ರಿ ತಂಡವೊಂದನ್ನು ಸೇರಿಕೊಂಡಿದ್ದರು.
ಪೊಲೀಸರು ಕೊಲೆ ಕೇಸನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.