ಅಜಾದ್ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಆಘಾತ : ಎಂಎ ಖಾನ್ ರಾಜೀನಾಮೆ
ರಾಜೀನಾಮೆ ಪತ್ರದಲ್ಲಿ ಎಂಎ ಖಾನ್ ಉಲ್ಲೇಖಿಸಿದ ಅಂಶಗಳೇನು ?
Team Udayavani, Aug 28, 2022, 11:10 AM IST
ಹೈದರಾಬಾದ್ : ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಟಿ=ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ತೆಲಂಗಾಣದ ರಾಜ್ಯಸಭಾ ಮಾಜಿ ಸದಸ್ಯ ಎಂಎ ಖಾನ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಶನಿವಾರ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು ಪತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ತನ್ನ ಹಿಂದಿನ ವೈಭವವನ್ನು ಮರಳಿ ಪಡೆಯುವಲ್ಲಿ, ದೇಶವನ್ನು ಮುನ್ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಅಲ್ಲದೆ ಪಕ್ಷದ ಸಮಿತಿಯ ಉಪಾಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿ ನಿಭಾಯಿಸಿದ ಬಳಿಕ ಪಕ್ಷದ ಪ್ರಗತಿ ಇಳಿಮುಖವಾಗಿದೆ. ಪಕ್ಷವನ್ನು ನಿಭಾಯಿಸುವಲ್ಲಿ ರಾಹುಲ್ ವಿಫಲರಾಗಿದ್ದಾರೆ ಅವರು ತಮ್ಮದೇ ಆದ ವಿಭಿನ್ನ ಆಲೋಚನಾ ಪ್ರಕ್ರಿಯೆಯನ್ನು ಹೊಂದಿದ್ದಾರೆ. ಇದು ಬ್ಲಾಕ್ ಮಟ್ಟದಿಂದ ಬೂತ್ ಹಂತದವರೆಗಿನ ಸದಸ್ಯರೊಂದಿಗೆ ಹೊಂದಾಣಿಕೆಯಾಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ವಿದ್ಯಾರ್ಥಿ ದಿನಗಳಿಂದ ಕಾಂಗ್ರೆಸ್ ಪಕ್ಷದೊಂದಿಗೆ ಬಾಂಧವ್ಯ ಹೊಂದಿದ್ದೇನೆ. ಪಂಡಿತ್ ನೆಹರೂ, ಇಂದಿರಾಗಾಂಧಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆ ಯಾವ ರೀತಿ ಇತ್ತು, ಪಕ್ಷ ಮುನ್ನಡೆಸಲು ಅವರು ಮಾಡಿದ ಯೋಜನೆ ಇಂದು ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ, ಅಲ್ಲದೆ ಪಕ್ಷವನ್ನು ಮುನ್ನಡೆಸುವ ಸಮರ್ಥ ನಾಯಕ ಯಾರೂ ಇಲ್ಲ ಈ ಎಲ್ಲಾ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ರಾಜೀನಾಮೆ ಕೊಡುವುದು ಬಿಟ್ಟರೆ ನನಗೆ ಬೇರೆ ದಾರಿ ಇರಲಿಲ್ಲ. ಹೀಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಇದನ್ನೂ ಓದಿ : ಕೊರಟಗೆರೆ : ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಕಳ್ಳ : ಅದೃಷ್ಟ ಚೆನ್ನಾಗಿತ್ತು ನೋಡಿ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
MUST WATCH
ಹೊಸ ಸೇರ್ಪಡೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.