![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 6, 2021, 2:51 PM IST
ನವದೆಹಲಿ: ಮಾಜಿ ಟಿಎಂಸಿ ಸಂಸದ, ಹಿರಿಯ ರಾಜಕಾರಣಿ ದಿನೇಶ್ ತ್ರಿವೇದಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವ ಪಿಯೂಶ್ ಗೋಯಲ್, ಬಿಜೆಪಿ ವಕ್ತಾರ ಸಂಬಿತ್ ಪತ್ರಾ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾದರು.
ದಿನೇಶ್ ತ್ರಿವೇದಿಯನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಜೆ.ಪಿ ನಡ್ಡಾ “ತ್ರಿವೇದಿ ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇನೆ. ಈವರೆಗೂ ಉತ್ತಮ ವ್ಯಕ್ತಿ, ತಪ್ಪಾದ ಪಕ್ಷದಲ್ಲಿದ್ದರು. ಈಗ ಸರಿಯಾದ ಪಕ್ಷಕ್ಕೆ ಬಂದಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಇವರು ಸಕ್ರಿಯವಾಗಿರಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿಗೆ ಸೇರ್ಪಡೆಗೊಂಡು ಮಾತನಾಡಿದ ದಿನೇಶ್ ತ್ರಿವೇದಿ, ಇಂದು ‘ಜನತಾ ಪರಿವಾರ್’ ಗೆ ಸೇರಿದ್ದೇನೆ. ಕೆಲವೊಂದು ಪಕ್ಷಗಳು(ಟಿಎಂಸಿ) ಜನರಿಗಾಗಿ ಕಾರ್ಯನಿರ್ವಹಿಸದೆ ಕೇವಲ ಕುಟುಂಬಕ್ಕಾಗಿ ಕೆಲಸಮಾಡುತ್ತಿದೆ. ಹಲವರು ವ್ಯಕ್ತಿಗಳು ಪಶ್ಚಿಮಬಂಗಾಳದ ಪ್ರಸ್ತುತ ಸ್ಥಿತಿಗತಿಯ ಕುರಿತು ನನ್ನಲ್ಲಿ ವಿಚಾರಿಸಿದರು. ಇಂದು ಆ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ: ಬಾಲಿವುಡ್‌ನಲ್ಲಿ ರಶ್ಮಿಕಾ ಫಸ್ಟ್ ಡೇ: ಮಿಷನ್ ಮಜ್ನು ಸಿನಿಮಾದಲ್ಲಿ ರಶ್ಮಿಕಾ ನಾಯಕಿ
ನಾನು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪರವಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತೇನೆ. ಪಶ್ಚಿಮಬಂಗಾಳ ರಾಜ್ಯದ ಜನತೆ ಟಿಎಂಸಿಯನ್ನು ತಿರಸ್ಕರಿಸಿದ್ದಾರೆ. ಅವರಿಗೆ ಅಭಿವೃದ್ದಿ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಮಾಜಿ ಕೆಂದ್ರ ಸಚಿವರಾಗಿದ್ದ ದಿನೇಶ್ ತ್ರಿವೇದಿ, ಇತ್ತೀಚಿಗಷ್ಟೇ ರಾಜ್ಯಸಭೆಯ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಪಶ್ಚಿಮ ಬಂಂಗಾಳದಲ್ಲಿ ಮಾರ್ಚ್ 27 ರಿಂದ 294 ವಿಧಾನಸಭಾ ಕ್ಷೇತ್ರಗಳಿಗೆ ಎಂಟು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 2ರಂದು ಮತಎಣಿಕೆ ನಡೆಯಲಿದೆ.
ಇದನ್ನೂ ಓದಿ: ರಾಜ್ಯ ಶಾಲಾ ಶಿಕ್ಷಣ ಮಂಡಳಿಗೆ ದೆಹಲಿ ಸರ್ಕಾರ ಒಪ್ಪಿಗೆ : ಕೇಜ್ರಿವಾಲ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.