AMU ಮಾಜಿ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷನಿಗೆ ಗುಂಡೇಟು, ಇರಿತ
Team Udayavani, Sep 26, 2017, 12:55 PM IST
ಆಲೀಗಢ : ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ವಿದ್ಯಾರ್ಥಿ ಸಂಘದ ಮಾಜಿ ಉಪಾಧ್ಯಕ್ಷನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡೆಸೆದು, ಚೂರಿಯಿಂದ ಇರಿದು ಗಾಯಗೊಳಿಸಿ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಯುನಿವರ್ಸಿಟಿಯ ಪ್ರಾಕ್ಟರ್ ಪ್ರೊ| ಮೊಹ್ಸಿನ್ ಖಾನ್ ತಿಳಿಸಿರುವ ಪ್ರಕಾರ ಈ ಹಲ್ಲೆ, ಗುಂಡೆಸೆತದ ಘಟನೆಯು ನಿನ್ನೆ ಸೋಮವಾರ ತಡರಾತ್ರಿ ಸಿವಿಲ್ ಲೈನ್ಸ್ ಪ್ರದೇಶದಲ್ಲಿರುವ ಎಎಂಯು ಕ್ಯಾಂಪಸ್‌ಗೆ ತಾಗಿಕೊಂಡಿರುವ ದೋಧ್‌ಪುರ ಪ್ರದೇಶದಲ್ಲಿ ನಡೆದಿದೆ.
ಗುಂಡೇಟು ಮತ್ತು ಚೂರಿ ಇರಿತದಿಂದ ಗಾಯಗೊಂಡ ನದೀಂ ಅನ್ಸಾರಿ ಅವರನ್ನು ಒಡನೆಯೇ ಜವಾಹರಲಾಲ್ ನೆಹರೂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿದೆ.
ಚಿಕಿತ್ಸೆ ನೀಡುತ್ತಿರುವ ವೈದ್ಯರ, ನದೀಂ ಅಪಾಯದಿಂದ ಪಾರಾಗಿದ್ದು ಅವರ ದೇಹಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ನದೀಂ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಅವರನ್ನು ಬಲವಂತದಿಂದ ತಡೆದ ಸಶಸ್ತ್ರ ಹಂತಕರು ನದೀಂ ಅವರನ್ನು ಚೂರಿಯಿಂದ ಇರಿದು ಗುಂಡೆಸೆದು ಪರಾರಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
MUST WATCH
ಹೊಸ ಸೇರ್ಪಡೆ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.