Kochi:ಟೆಕ್ ಫೆಸ್ಟ್ ವೇಳೆ ನೂಕುನುಗ್ಗಲು; ನಾಲ್ವರು ಮೃತ್ಯು, 64 ಮಂದಿಗೆ ಗಾಯ
Team Udayavani, Nov 25, 2023, 10:45 PM IST
ಕೊಚ್ಚಿ: ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ( CUSAT) ಶನಿವಾರ ನಡೆದ ಟೆಕ್ ಫೆಸ್ಟ್ ವೇಳೆ ಕಾಲ್ತುಳಿತ ಸಂಭವಿಸಿ ಕನಿಷ್ಠ ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಘಟನೆ ನಡೆದಾಗ ಗಾಯಕಿ ನಿಖಿತಾ ಗಾಂಧಿ ಕಾರ್ಯಕ್ರಮ ನಡೆಸುತ್ತಿದ್ದರು. ಗಾಯಗೊಂಡ ವಿದ್ಯಾರ್ಥಿಗಳನ್ನು ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.
ಕಲಮಸ್ಸೆರಿ ವೈದ್ಯಕೀಯ ಕಾಲೇಜಿಗೆ ಆಗಮಿಸುವಷ್ಟರಲ್ಲಿ ಇಬ್ಬರು ವಿದ್ಯಾರ್ಥಿ ಮತ್ತು ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ”ವಿಶ್ವವಿದ್ಯಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಇಡೀ ರಾಜ್ಯವು ಆಘಾತಕ್ಕೊಳಗಾಗಿದೆ. ಪ್ರಾಣ ಕಳೆದುಕೊಂಡ ನಾಲ್ವರು ವಿದ್ಯಾರ್ಥಿಗಳ ಕುಟುಂಬ ಸದಸ್ಯರಿಗೆನೋವಿನಲ್ಲಿ ಸಂತಾಪ. ಗಾಯಾಳುಗಳಿಗೆ ತತ್ ಕ್ಷಣದ ಮತ್ತು ಸುಧಾರಿತ ಚಿಕಿತ್ಸಾ ಸೌಲಭ್ಯಗಳನ್ನು ಏರ್ಪಡಿಸಲಾಗಿದೆ. ಕೈಗಾರಿಕೆ ಸಚಿವ ಪಿ.ರಾಜೀವ್ ಮತ್ತು ಉನ್ನತ ಶಿಕ್ಷಣ ಸಚಿವ ಆರ್.ಬಿಂದು ಪರಿಸ್ಥಿತಿಯನ್ನು ನೇರವಾಗಿ ಅವಲೋಕಿಸಲು ಎರ್ನಾಕುಲಂಗೆ ತೆರಳಿದ್ದಾರೆ. ಘಟನೆಯ ಸಂಪೂರ್ಣ ತನಿಖೆ ವಿಳಂಬವಿಲ್ಲದೆ ಪ್ರಾರಂಭವಾಗುತ್ತದೆ” ಎಂದು ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.