ಲೋಕಸಭೆ ಮುಂಗಾರು ಅಧಿವೇಶನದಿಂದ ನಾಲ್ವರು ಕಾಂಗ್ರೆಸ್ ಸಂಸದರು ಅಮಾನತು
ಲೋಕಸಭೆಯಲ್ಲಿ ವಿಪಕ್ಷಗಳ ತೀವ್ರ ಪ್ರತಿಭಟನೆ
Team Udayavani, Jul 25, 2022, 4:25 PM IST
ನವದೆಹಲಿ: ಲೋಕಸಭೆ ಅಧಿವೇಶನದ ವೇಳೆ ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿ ಪಡಿಸಿದ ನಾಲ್ವರು ಕಾಂಗ್ರೆಸ್ ಲೋಕಸಭಾ ಸದಸ್ಯರನ್ನು ಸಂಪೂರ್ಣ ಮುಂಗಾರು ಅಧಿವೇಶನದಿಂದ ಸೋಮವಾರ ಅಮಾನತು ಮಾಡಲಾಗಿದೆ.
ಮಾಣಿಕಂ ಠಾಗೋರ್, ರಮ್ಯಾ ಹರಿದಾಸ್, ಜ್ಯೋತಿಮಣಿ ಮತ್ತು ಟಿ.ಎನ್. ಪ್ರತಾಪನ್ ಅವರನ್ನು ಸ್ಪೀಕರ್ ಓಂ ಬಿರ್ಲಾ ಅವರು ಕಲಾಪದಿಂದ ಅಮಾನತು ಮಾಡಿದ್ದಾರೆ.
ಪದೇ ಪದೇ ಎಚ್ಚರಿಕೆ ನೀಡಿದ ಹೊರತಾಗಿಯೂ ಫಲಕಗಳನ್ನು ಪ್ರದರ್ಶಿಸಿದ ಮತ್ತು ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಈ ಕ್ರಮ ಕೈಗೊಂಡಿದ್ದಾರೆ.
ಬೆಲೆ ಏರಿಕೆ ಸೇರಿದಂತೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ವಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಕಲಾಪವನ್ನು ನಾಳೆಗೆ(ಮಂಗಳವಾರ) ಮುಂದೂಡಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.