Tragedy: ದೆಹಲಿಯಲ್ಲಿ ಭೀಕರ ಬೆಂಕಿ ಅವಘಡ… 9 ತಿಂಗಳ ಮಗು ಸೇರಿ ನಾಲ್ವರು ಮೃತ್ಯು
Team Udayavani, Jan 27, 2024, 8:40 AM IST
ನವದೆಹಲಿ: ಶಹದಾರ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದ ನೆಲ ಮಹಡಿಯಲ್ಲಿರುವ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಒಂಬತ್ತು ತಿಂಗಳ ಹೆಣ್ಣು ಮಗು ಸೇರಿದಂತೆ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಶಹದಾರ ಪ್ರದೇಶದ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ 5:22 ಕ್ಕೆ ಕರೆ ಬಂದಿತ್ತು ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಐದು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ಸಂಜೆ 6:55 ರ ಹೊತ್ತಿಗೆ ಬೆಂಕಿಯನ್ನು ನಂದಿಸಲಾಯಿತು. ಕಟ್ಟಡದ ನೆಲ ಅಂತಸ್ತಿನ ಮನೆಯೊಂದರಲ್ಲಿ ಇರಿಸಲಾಗಿದ್ದ ವೈಪರ್‌ಗಳು ಮತ್ತು ರಬ್ಬರ್ ಕತ್ತರಿಸುವ ಯಂತ್ರದಂತಹ ರಬ್ಬರ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ” ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್‌ಎಸ್) ಮುಖ್ಯಸ್ಥ ಅತುಲ್ ಗರ್ಗ್ ಹೇಳಿದ್ದಾರೆ.
ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಾಯದಿಂದ ಮೂವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದೇ ವೇಳೆ ಅರೆಪ್ರಜ್ಞಾವಸ್ಥೆಯಲ್ಲಿದ್ದ ಒಂಬತ್ತು ತಿಂಗಳ ಮಗು ಸೇರಿದಂತೆ ನಾಲ್ವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೋತ್ತಿಗಾಗಲೇ ನಾಲ್ವರು ಮೃತಪಟ್ಟಿದ್ದರು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
28 ಮತ್ತು 40 ವರ್ಷದ ಇಬ್ಬರು ಮಹಿಳೆಯರು ಜೊತೆಗೆ ಒಂಬತ್ತು ತಿಂಗಳ ಹೆಣ್ಣು ಮಗು ಮತ್ತು 17 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 16 ವರ್ಷದ ಬಾಲಕಿ ಮತ್ತು 70 ವರ್ಷದ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಟ್ಟಡವು ನಾಲ್ಕು ಮಹಡಿಗಳನ್ನು ಹೊಂದಿದ್ದು ಸದ್ಯ ಘಟನೆಗೆ ಸಂಬಂಧಿಸಿ ಕಟ್ಟಡ ಮಾಲೀಕ ಭರತ್ ಸಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.