ಪುಲ್ವಾಮದಲ್ಲಿ ನಾಲ್ವರು ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಸೇನೆ
Team Udayavani, Apr 1, 2019, 9:25 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಲಸ್ಸಿಪೋರಾ ಎಂಬಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಸೋಮವಾರದಂದು ನಡೆದ ಗುಂಡಿನ ದಾಳಿಯಲ್ಲಿ ಸೇನೆ ನಾಲ್ವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸಫಲವಾಗಿದೆ. ಈ ಉಗ್ರರು ಲಷ್ಕರ್ – ಇ -ತಯ್ಬಾ ಸಂಘಟನೆಗೆ ಸೇರಿದವರೆಂದು ತಿಳಿದುಬಂದಿದೆ. ಈ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಮೂವರು ಯೋಧರೂ ಸಹ ಗಾಯಗೊಂಡಿದ್ದಾರೆ.
ಸೋಮವಾರ ನಸುಕಿನ ಜಾವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಈ ಸಂದರ್ಭದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿರುವ ಕುರಿತು ವರದಿಯಾಗಿದೆ. ಉಗ್ರರು ಅಡಗಿರುವ ಈ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರೆದಿದ್ದು ಈ ಭಾಗದಲ್ಲಿ ತೀವ್ರ ಶೋಧ ಕಾರ್ಯವನ್ನು ಕೈಗೊಂಡಿದೆ. ಇನ್ನೂ ಮೂವರು ಉಗ್ರರು ಈ ಭಾಗದಲ್ಲಿ ಅಡಗಿರುವ ಶಂಕೆಯನ್ನು ಸೇನಾ ಮೂಲಗಳು ವ್ಯಕ್ತಪಡಿಸಿವೆ.
55 ರಾಷ್ಟ್ರೀಯ ರೈಫಲ್ ದಳ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಪಡೆ ಹಾಗೂ ಕೆಂದ್ರೀಯ ಮೀಸಲು ಪೊಲೀಸ್ ಪಡೆಗಳು ಜಂಟಿಯಾಗಿ ಈ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಎನ್ ಕೌಂಟರ್ ನಲ್ಲಿ ಮೃತಪಟ್ಟಿರುವ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಎರಡು ಎ.ಕೆ. ರೈಫಲ್ ಗಳು, ಒಂದು ಎಸ್.ಎಲ್.ಆರ್. ಮತ್ತು ಒಂದು ಪಿಸ್ತೂಲ್ ಅನ್ನು ಇದೇ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.