ವಾಹನಕ್ಕೆ ಟ್ರಕ್ ಢಿಕ್ಕಿ : ಒಂದೇ ಕುಟುಂಬದ ನಾಲ್ವರ ದಾರುಣ ಸಾವು
Team Udayavani, Apr 29, 2017, 4:18 PM IST
ಬರ್‌ದ್ವಾನ್ (ಪಶ್ಚಿಮ ಬಂಗಾಲ): ಅಂದಾಲ್ ಸಮೀಪ ಕಜೋರಾ ರಸ್ತೆಯಲ್ಲಿ ಟ್ರಕ್ ಒಂದು ವಾಹನಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಬಂಕುರಾ ಜಿಲ್ಲೆಯ ಘಂತಿಪಹಾಡ್ ಎಂಬಲ್ಲಿ ಮದುವೆ ಸಮಾರಂಭ ಮುಗಿಸಿ ದುರ್ಗಾಪುರದ ರಾಣಾ ಪ್ರತಾಪ್ ಪ್ರದೇಶಕ್ಕೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿತು.
ಭಾರೀ ಸರಕು ತುಂಬಿದ ಟ್ರಕ್ ಒಂದು ತನ್ನ ಎದುರಲ್ಲಿ ಸಾಗುತ್ತಿದ್ದ ವಾಹನಕ್ಕೆ ಹಿಂದಿನಿಂದ ಢಿಕ್ಕಿ ಹೊಡೆಯಿತು. ಆಗ ವಾಹನವು ತನ್ನ ಎದುರಿಗೆ ಸಾಗುತ್ತಿದ್ದ ಟ್ರೇಲರ್‌ಗೆ ಢಿಕ್ಕಿ ಹೊಡೆಯಿತು. ಇದರಿಂದಾಗಿ ವಾಹನವು ಸಂಪೂರ್ಣ ಅಪ್ಪಚ್ಚಿಯಾಯಿತು. ವಾಹನದೊಳಗೆ ಒಂದೇ ಕುಟುಂಬದ ಐವರು ಇದ್ದು ಅವರಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರು.
ಮೃತರನ್ನು ಮಿಲಾನ್ ಮುಖಜಿ, ಭಕ್ತಿ ಮುಖರ್ಜಿ, ಕೋನಿಕಾ ಮುಖರ್ಜಿ ಮತ್ತು ಸೌಮೇನ್ ಮುಖರ್ಜಿ (8ನೇ ತರಗತಿ ವಿದ್ಯಾರ್ಥಿನಿ) ಎಂದು ಗುರುತಿಸಲಾಗಿದೆ. ಗಾಯಾಳು ಜಿಬಾನ್ ಮುಖರ್ಜಿ ಅವರನ್ನು ಡಿಎಸ್‌ಪಿ ಆಸ್ಪತ್ರೆಗೆ ಸೇರಿಸಲಾಗಿದೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.