ಹಳೇ ವೈಷಮ್ಯ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
Team Udayavani, Jan 31, 2018, 11:18 AM IST
ಬಂಡಾ, ಉತ್ತರ ಪ್ರದೇಶ : ನಗರ ಹೊರವಲಯದ ಛೋಟೆ ಕಾ ಪುರ್ವಾ ಪ್ರದೇಶದಲ್ಲಿ ಅಪರಿಚಿತ ಹಂತಕರು ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದ ಮಹಾವೀರ್ 46, ಆತನ ಪತ್ನಿ ಚುನ್ನೀ 43, ಇಬ್ಬರು ಬಾಲಕರಾದ ರಾಜ್ಕುಮಾರ್ ಮತ್ತು ಪವನ್ ಕುಮಾರ್ ಅವರ ಮೃತ ದೇಹಗಳು ಅವರ ಮನೆಯಲ್ಲೇ ಪತ್ತೆಯಾದವು ಎಂದು ಡಿಐಜಿ ಜ್ಞಾನೇಶ್ವರ್ ತಿವಾರಿ ತಿಳಿಸಿದ್ದಾರೆ.
ಈ ಕೊಲೆಗಳು ಮೇಲ್ನೋಟಕ್ಕೆ ಹಳೇ ವೈಷಮ್ಯದ ಕಾರಣಕ್ಕೆ ನಡೆದಿರುವುದಾಗಿ ಕಂಡು ಬರುತ್ತದೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎದು ತಿವಾರಿ ಹೇಳಿದರು.
ಮಹಾವೀರ್ ಅವರ ಆರು ವರ್ಷದ ಪುತ್ರಿ ಮತ್ತು ಒಬ್ಬ ಮಗ ನೆರೆಮನೆಯಲ್ಲಿ ಮಲಗಿಕೊಂಡಿದ್ದರಿಂದ ಅವರು ಹತ್ಯೆಯಾಗುವುದರಿಂದ ಪಾರಾದರು ಎಂದು ತಿವಾರಿ ಹೇಳಿದರು.
ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.