Chhattisgarh; 4 ವರ್ಷದ ಬಾಲಕಿ ಮೇಲೆ 10,13 ವರ್ಷದ ಹುಡುಗರಿಬ್ಬರಿಂದ ಲೈಂಗಿ*ಕ ದೌರ್ಜನ್ಯ
ಸಮಾಜ ಎತ್ತ ಸಾಗುತ್ತಿದೆ ಎನ್ನುವ ಪ್ರಶ್ನೆ...
Team Udayavani, Jan 13, 2025, 6:31 PM IST
ನಾರಾಯಣಪುರ: ಸಮಾಜ ಎತ್ತ ಸಾಗುತ್ತಿದೆ ಎನ್ನುವ ಪ್ರಶ್ನೆಗೆ ಇಂಬು ನೀಡುವಂತೆ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಅತ್ಯಂತ ಕಳವಳಕಾರಿ ವಿದ್ಯಮಾನವೊಂದರಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಇಬ್ಬರು ಬಾಲಕರು ತಮ್ಮೊಂದಿಗೆ ಆಟವಾಡುವಂತೆ ಆಮಿಷ ಒಡ್ಡಿ ಅತ್ಯಾಚಾ*ರವೆಸಗಿದ್ದಾರೆ.
ಜನವರಿ 10 ರಂದು ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದ ಹಲ್ಲೆಗೆ ಸಂಬಂಧಿಸಿದಂತೆ 10 ರಿಂದ 13 ವರ್ಷ ವಯಸ್ಸಿನ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಾನುವಾರ ಬಾಲಕಿಯನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತಂದ ಬಳಿಕ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ . ಆಕೆಯ ಸ್ಥಿತಿ ಸ್ಥಿರವಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿಗಳಲ್ಲಿ ಒಬ್ಬನ ಕುಟುಂಬವು ಹುಡುಗಿಯ ಕುಟುಂಬದ ಬಾಡಿಗೆದಾರರಾಗಿದ್ದು, ಇನ್ನೊಬ್ಬ ಹುಡುಗ ಆಕೆಯ ನೆರೆಹೊರೆಯವರಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಒಬ್ಬ ಬಾಲಕ 5ನೇ ತರಗತಿ ಓದುತ್ತಿದ್ದು, ಮತ್ತೊಬ್ಬ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಬಾಲಕರು ಗ್ರಾಮದ ಹೊರವಲಯದಲ್ಲಿರುವ ಜಮೀನಿನಲ್ಲಿ ಆಟವಾಡಲು ಮಗುವನ್ನು ಕರೆದೊಯ್ದು ಲೈಂಗಿ*ಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ವೈದ್ಯಕೀಯ ಪರೀಕ್ಷೆ ನಂತರ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದ್ದು, ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota ಸರಣಿ ಸುಸೈ*ಡ್ ಬೆನ್ನಲ್ಲೇ ಐಐಟಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಆತ್ಮಹ*ತ್ಯೆ!
LDF; ನೀಲಂಬೂರ್ ಶಾಸಕ ಅನ್ವರ್ ರಾಜೀನಾಮೆ: ‘ಕೈ’ಗೆ ಬೆಂಬಲ
Odisha:ಎಮರ್ಜೆನ್ಸಿ ವೇಳೆ ಜೈಲು ಸೇರಿದ್ದವರಿಗೆ 20,000 ಪಿಂಚಣಿ
Rift Widen: ಮೈತ್ರಿಕೂಟ ಪಾಲನೆ ಎನ್‌ಡಿಎ ನೋಡಿ ಕಲಿಯಿರಿ: ಕಾಂಗ್ರೆಸ್‌ಗೆ ಉದ್ಧವ್ ಬಣ ಪಾಠ
Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ
MUST WATCH
ಹೊಸ ಸೇರ್ಪಡೆ
Mahakumbh Mela 2025: 144 ವರ್ಷಗಳಿಗೆ ಒಮ್ಮೆ ನಡೆಯುವ ಆಧ್ಯಾತ್ಮಿಕ ವಿಸ್ಮಯ ಮಹಾ ಕುಂಭಮೇಳ
Udupi; ಮಕರ ಸಂಕ್ರಾಂತಿ ಸಂಭ್ರಮ: ಕೃಷ್ಣ ಗೀತಾನುಗ್ರಹ ಮಂಟಪ ಉದ್ಘಾಟನೆ
ಅಲಸಂಡೆ ಆಯಿತು, ಈಗ ಬಾಹ್ಯಾಕಾಶದಲ್ಲಿ ಚಿಗುರಿದ ಅಮಿಟಿ ವಿವಿಯ ಪಾಲಾಕ್
Kota ಸರಣಿ ಸುಸೈ*ಡ್ ಬೆನ್ನಲ್ಲೇ ಐಐಟಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಆತ್ಮಹ*ತ್ಯೆ!
Ukraine-Russia war: ರಷ್ಯಾ ಸೇನೆಯಲ್ಲಿದ್ದ ಕೇರಳದ ವ್ಯಕ್ತಿ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.