Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
ಸರಕಾರಿ ಹುದ್ದೆಗೆ ಎಸ್‌ಸಿ ಜಾತಿ ಪ್ರಮಾಣ ಪಡೆದಿದ್ದ ಪ್ರಕರಣ
Team Udayavani, Nov 28, 2024, 7:00 AM IST
ಹೊಸದಿಲ್ಲಿ: ದೃಢ ನಂಬಿಕೆಯ ತಳಹದಿ ಇಲ್ಲದೆ ಮತ್ತು ಕೇವಲ ಮೀಸಲಾತಿ ಲಾಭಕ್ಕಾಗಿ ಮತಾಂತರವಾಗುವುದು ಇಲ್ಲವೇ ಮರು ಮತಾಂತರ ವಾಗುವುದು ಸಂವಿಧಾನಕ್ಕೆ ಮಾಡಿದ ಮೋಸವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾ| ಪಂಕಜ್ ಮಿತ್ತಲ್ ಮತ್ತು ನ್ಯಾ| ಆರ್. ಮಹಾದೇವನ್ ಅವರಿದ್ದ ಪೀಠವು ಈ ಕುರಿತು ಮಹತ್ವದ ತೀರ್ಪು ನೀಡಿದೆ. ಮತಾಂತರದ ಉದ್ದೇಶವು ಬಹುಮಟ್ಟಿಗೆ ಮೀಸಲು ಸೌಲಭ್ಯದ ಪ್ರಯೋಜನಗಳನ್ನು ಪಡೆಯುವುದಾಗಿದ್ದರೆ ಮತ್ತು ಮತಾಂತರಗೊಂಡ ಧರ್ಮದಲ್ಲಿ ಯಾವುದೇ ನಿಜವಾದ ನಂಬಿಕೆಯಿಲ್ಲದಿದ್ದರೆ, ಅದಕ್ಕೆ ಮಾನ್ಯತೆ ಇರುವುದಿಲ್ಲ. ಅಂತಹ ಜನರಿಗೆ ಮೀಸಲಾತಿಯ ಪ್ರಯೋಜನಗಳನ್ನು ವಿಸ್ತರಿಸುವುದು ಸಾಮಾಜಿಕ ನೀತಿ ಮತ್ತು ಮೀಸಲಾತಿಗೆ ಅಪಚಾರವಾಗುತ್ತದೆ ಎಂದು ಪೀಠ ಹೇಳಿದೆ.
ಏನಿದು ಪ್ರಕರಣ?
ಜನ್ಮತಃ ಕ್ರೈಸ್ತರಾಗಿರುವ ಪುದುಚೇರಿಯ ಸಿ. ಸೆಲ್ವರಾಣಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ಎಸ್‌ಟಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದರು. ಅದೇ ಆಧಾರದ ಮೇಲೆ ಗುಮಾಸ್ತೆ ಹುದ್ದೆಗೆ ಅರ್ಜಿ ಹಾಕಿದ್ದರು. ಆದರೆ ಸರಕಾರ ಒಪ್ಪಿರಲಿಲ್ಲ. ಇದನ್ನು ಪ್ರಶ್ನಿಸಿ ಆಕೆ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ವೇಳೆ ಆಕೆಯ ಪೋಷಕರು ಭಾರತೀಯ ಕ್ರೈಸ್ತ ವಿವಾಹ ಕಾಯ್ದೆಯಡಿ ಮದುವೆಯಾಗಿರುವುದು, ಆಕೆ ನಿಯಮಿತವಾಗಿ ಚರ್ಚ್‌ಗೆ ಹೋಗುತ್ತಿರುವುದು, ಕೇವಲ ನೌಕರಿ ಆಸೆಗೋಸ್ಕರ ಹಿಂದೂ ಧರ್ಮ ಸ್ವೀಕರಿಸಿದ್ದಾರೆ ಎಂದು ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ಅರ್ಜಿಯನ್ನು ತಳ್ಳಿ ಹಾಕಿತ್ತು. ಬಳಿಕ ಆಕೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇಂತಹ ದ್ವಂದ್ವ ನಿರ್ಧಾರಗಳನ್ನು ಮಾನ್ಯ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.