ಬಲಗೊಳ್ಳುತ್ತಿದೆ ಕೊರೊನಾ ಕಪಿಮುಷ್ಟಿ ! ಉಚಿತ ಪರೀಕ್ಷೆಗೆ ಸೂಚನೆ
Team Udayavani, Mar 18, 2020, 7:45 AM IST
ಹೊಸದಿಲ್ಲಿ/ ಬೆಂಗಳೂರು: ದೇಶಾದ್ಯಂತ ಕೊರೊನಾ ಸೋಂಕು ಪೀಡಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ದೇಶದಲ್ಲಿ 142ಕ್ಕೆ ಏರಿದ್ದರೆ, ರಾಜ್ಯದಲ್ಲಿ 11 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಅದೃಷ್ಟವಶಾತ್ ಇವರಲ್ಲಿ ಮೂವರು ಮಂಗಳವಾರ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸಾcರ್ಜ್ ಆಗಿದ್ದಾರೆ. ಅತ್ತ ಇರಾನ್‌ನಲ್ಲಿ ಸಿಲುಕಿರುವ 250ಕ್ಕೂ ಹೆಚ್ಚು ಭಾರತೀಯರಿಗೆ ಸೋಂಕು ದೃಢಪಟ್ಟಿದೆ ಎಂದು ಅಲ್ಲಿಗೆ ತೆರಳಿರುವ ವೈದ್ಯರು ಹೇಳಿದ್ದಾರೆ.
ದೇಶಾದ್ಯಂತ 142ಕ್ಕೆ ಏರಿಕೆ
ಅತ್ತ ಮಹಾರಾಷ್ಟ್ರ, ಕೇರಳ, ಲಡಾಖ್‌ಗಳಲ್ಲಿ ಸೋಂಕು ಪೀಡಿತರ ಸಂಖ್ಯೆ ಏರಿಕೆಯಾಗಿದೆ. ಹೀಗಾಗಿ ಭಾರತದಲ್ಲಿ ಒಟ್ಟಾರೆಯಾಗಿ ಕೊರೊನಾ ಪೀಡಿತರ ಸಂಖ್ಯೆ 142ಕ್ಕೆ ಏರಿದೆ. ಸದ್ಯ ಕೇಂದ್ರ ಆರೋಗ್ಯ ಸಚಿವಾಲಯ 137 ಪ್ರಕರಣಗಳ ಬಗ್ಗೆಯಷ್ಟೇ ಹೇಳಿದ್ದರೂ ಮಹಾರಾಷ್ಟ್ರದಲ್ಲಿನ ಒಟ್ಟಾರೆ ಸಂಖ್ಯೆಗಳನ್ನು ಅಪ್ ಡೇಟ್ ಮಾಡಿಲ್ಲ.
54 ಸಾವಿರ ಮಂದಿ ಮೇಲೆ ನಿಗಾ
ದೇಶಾದ್ಯಂತ 54 ಸಾವಿರ ಮಂದಿ ಮೇಲೆ ಸಾಮುದಾಯಿಕ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ಹರ್ಷ ವರ್ಧನ್ ಮಂಗಳವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಸಾರ್ವಜನಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ ಎಂದೂ ಹೇಳಿದ್ದಾರೆ.
ಖಾಸಗಿ ಲ್ಯಾಬ್‌ಗಳಿಗೆ ಅವಕಾಶ
ಕೊರೊನಾ ಭೀತಿ ಹೆಚ್ಚಾಗುತ್ತಿರುವ ಬೆನ್ನಲ್ಲೇ ಸೋಂಕು ಪತ್ತೆ ಸಾಮರ್ಥ್ಯ ಹೆಚ್ಚಳಕ್ಕಾಗಿ ಮಾನ್ಯತೆ ಪಡೆದಿರುವ ಖಾಸಗಿ ಪ್ರಯೋಗಾಲಯಗಳಿಗೂ ಕೊರೊನಾ ಪರೀಕ್ಷೆ ನಡೆಸುವ ಅವಕಾಶ ಕಲ್ಪಿಸಲಾಗಿದೆ. ಅಷ್ಟೇ ಅಲ್ಲ, ಕೋವಿಡ್-19 ಪರೀಕ್ಷೆಯನ್ನು ಉಚಿತವಾಗಿಯೇ ಮಾಡಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ. ಸದ್ಯ ಸರಕಾರಿ ಪ್ರಯೋಗಾಲಯಗಳು ಮಾತ್ರ ಪರೀಕ್ಷೆ ನಡೆಸುತ್ತಿವೆ. ಸದ್ಯದಲ್ಲೇ ಕೇಂದ್ರ ಸರಕಾರ 60 ಖಾಸಗಿ ಪ್ರಯೋಗಾಲಯಗಳಿಗೆ ಪರೀಕ್ಷೆಗೆ ಅನುಮತಿ ನೀಡಲಿದೆ.
ಕರ್ನಾಟಕದಲ್ಲಿ 11 ಮಂದಿಗೆ ಸೋಂಕು
ಸೋಮವಾರ ರಾತ್ರಿಯಷ್ಟೇ ಕರ್ನಾಟಕದಲ್ಲಿ ಮತ್ತೆರಡು ಪ್ರಕರಣಗಳು ದೃಢಪಟ್ಟಿದ್ದು, ಮಂಗಳವಾರದ ವೇಳೆಗೆ ಮತ್ತೂಂದು ಬಯಲಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕಳೆದ ವಾರ ದುಬಾೖಯಿಂದ ಬೆಂಗಳೂರಿಗೆ ಹಿಂದಿರುಗಿದ್ದ 67 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಮಾ.3ರಿಂದ 8ರ ವರೆಗೆ ದುಬಾೖಯಲ್ಲಿ ಇದ್ದ ಈ ಮಹಿಳೆ ಗೋವಾಕ್ಕೆ ಬಂದು ಅಲ್ಲಿಂದ ದೇಶೀ ವಿಮಾನದ ಮೂಲಕ ಬೆಂಗಳೂರಿಗೆ ಬಂದಿದ್ದರು. ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ. ಅವರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅವರೊಂದಿಗಿನ ಪ್ರಥಮ ಮತ್ತು ಎರಡನೇ ಹಂತದಲ್ಲಿ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಪತ್ತೆ ಕಾರ್ಯ ನಡೆಸಲಾಗುತ್ತಿದೆ.
ದಂತ ಸೇವೆಗಳು ಬಂದ್
ದಂತ ಚಿಕಿತ್ಸೆ ಅತ್ಯಗತ್ಯ ಸೇವೆ ಅಲ್ಲ. ಮುಂದಿನ ಆದೇಶದವರೆಗೆ ರಾಜ್ಯದ ಎಲ್ಲ ದಂತ ಚಿಕಿತ್ಸಾ ಕೇಂದ್ರ ಮುಚ್ಚಲು ಸೂಚನೆ ನೀಡಿದ್ದೇವೆ. ಈ ಚಿಕಿತ್ಸಾ ಕ್ರಮದಲ್ಲಿ ವೈದ್ಯರಿಗೆ ರೋಗಿಗೆ ಅಂತರ ಕಡಿಮೆ ಇರುತ್ತದೆ. ಹಾಗಾಗಿ ಈ ನಿರ್ಧಾರ ಕೈಗೊಂಡಿದ್ದೇವೆ. ಫಿಸಿಯೋಥೆರಪಿ ಸದ್ಯಕ್ಕೆ ಮುಚ್ಚುವುದಿಲ್ಲ, ಪರಿಸ್ಥಿತಿ ನೋಡಿ ನಿರ್ಧರಿಸಲಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಹೇಳಿದ್ದಾರೆ.
ಎಸಿ ಆಫ್ ಮಾಡಿ
ಹವಾನಿಯಂತ್ರಿತ (ಎಸಿ) ಸ್ಥಳದಲ್ಲಿ ಹೆಚ್ಚಿನ ಜನರು ಇದ್ದರೆ ವೈರಾಣುಗಳು ಹೆಚ್ಚು ಕಾಲ ಸಕ್ರಿಯವಾಗಿದ್ದು, ಸಾಕಷ್ಟು ಜನರಿಗೆ ಹರಡುವ ಸಾಧ್ಯತೆ ಇದೆ. ಹಾಗಾಗಿ ರೆಸ್ಟೋರೆಂಟ್‌ಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆ ಬಂದ್ ಮಾಡಲು, ಕುರ್ಚಿಗಳ ಮಧ್ಯೆ ಒಂದು ಮೀಟರ್ ಅಂತರ ಕಾಯ್ದುಕೊಳ್ಳುವಂತೆ ಮಾಲಕರಿಗೆ ಸೂಚಿಸಲಾಗಿದೆ ಎಂದು ಡಾ| ಸುಧಾಕರ್ ತಿಳಿಸಿದ್ದಾರೆ.
ಕೆಎಸ್‌ಆರ್‌ಟಿಸಿಗೆ ನಷ್ಟ
ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ರಸ್ತೆ ಸಾರಿಗೆ ನಿಗಮಕ್ಕೆ ಭಾರೀ ನಷ್ಟವಾಗಿದೆ. ಜತೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ತೆರಳುವ 818 ಬಸ್‌ಗಳ ಸಂಚಾರ ರದ್ದು ಮಾಡಲಾಗಿದೆ. ಮಂಗಳವಾರ ರಾತ್ರಿಯಿಂದಲೇ ಇದು ಜಾರಿಗೆ ಬಂದಿದೆ.
ಕಲಬುರಗಿ ವೈದ್ಯನಿಗೂ ಸೋಂಕು
ಕೊರೊನಾ ಸೋಂಕಿನಿಂದ ಮೃತಪಟ್ಟ ಕಲಬುರಗಿಯ 76 ವರ್ಷದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ಖಾಸಗಿ ವೈದ್ಯನಿಗೂ ಕೊರೊನಾ ಸೋಂಕು ಹರಡಿದೆ. ಈ ಮೂಲಕ ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಮೂರಕ್ಕೆ ಏರಿಕೆಯಾದಂತಾಗಿದೆ. ವೃದ್ಧನ ಸಾವಿಗೂ ಮುನ್ನ ಮನೆಯಲ್ಲಿ ಈ ವೈದ್ಯರು ಚಿಕಿತ್ಸೆ ನೀಡಿದ್ದರು ಎಂದು ಜಿಲ್ಲಾಧಿಕಾರಿ ಶರತ್ ಬಿ. ಖಚಿತಪಡಿಸಿದ್ದಾರೆ.
ಕೊರೊನಾ ಸೋಂಕು ಪೀಡಿತ ವೈದ್ಯನನ್ನು ಇಎಸ್‌ಐ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಐಸೋಲೇಟೆಡ್ ವಾರ್ಡ್‌ಗೆ ರವಾನಿಸಲಾಗಿದೆ. ಅಲ್ಲದೆ ಈ ವೈದ್ಯನೊಂದಿಗೆ ಸಂಪರ್ಕ ಹೊಂದಿದ್ದವರನ್ನು ಗುರುತಿಸಲಾಗುವುದು ಮತ್ತು ವೈದ್ಯನ ಕುಟುಂಬದವರನ್ನು ಮನೆಯಲ್ಲೇ ಪ್ರತ್ಯೇಕಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಇರಾನ್‌ನಲ್ಲಿ 250 ಭಾರತೀಯರಿಗೆ ಸೋಂಕು
ಕಳೆದ ಫೆಬ್ರವರಿಯಿಂದ ಇರಾನ್‌ನ ಖ್ವಾಂಮ್‌ನಲ್ಲಿ ಸಿಲುಕಿರುವ 250ಕ್ಕೂ ಹೆಚ್ಚು ಭಾರತೀಯರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದೆ ಎಂದು ಅವರನ್ನು ಕರೆತರಲು ಇರಾನ್‌ಗೆ ತೆರಳಿರುವ ವೈದ್ಯರ ತಂಡ ಹೇಳಿದೆ. ಈ ಪ್ರದೇಶದಲ್ಲಿ ಒಟ್ಟಾರೆ 800ಕ್ಕೂ ಹೆಚ್ಚು ಭಾರತೀಯರು ಸಿಲುಕಿದ್ದಾರೆ. ಜತೆಗೆ ಈ ಪ್ರದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ. ಆದರೆ ಕೇಂದ್ರ ಸರಕಾರವು ಈ ಬಗ್ಗೆ ಇನ್ನೂ ದೃಢಪಡಿಸಿಲ್ಲ.
ಭಾರತದಲ್ಲಿ ಹಂತ – 2
ಸದ್ಯಕ್ಕೆ ಭಾರತವು 2ನೇ ಹಂತದಲ್ಲಿ ಅಂದರೆ, ಸ್ಥಳೀಯ ಮಟ್ಟದ ವ್ಯಾಪಿಸುವಿಕೆಯ ಹಂತದಲ್ಲಿದೆ. ಸದ್ಯ ಇರುವ ಮಾಹಿತಿ ಪ್ರಕಾರ, ಕೊರೊನಾ ಸೋಂಕು ಸ್ಥಳೀಯವಾಗಿ ಹಬ್ಬಿದೆಯೇ ವಿನಾ ಇನ್ನೂ ಸಾಮುದಾಯಿಕ ವ್ಯಾಪಿಸುವಿಕೆಯ ಹಂತಕ್ಕೆ ತಲುಪಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ (ಐಸಿಎಂಆರ್)ಯ ಮಹಾನಿರ್ದೇಶಕ ಬಲರಾಮ್ ಭಾರ್ಗವ ತಿಳಿಸಿದ್ದಾರೆ.
ಮುನ್ನೆಚ್ಚರಿಕೆಗಳು
– ಕಳೆದ 14 ದಿನಗಳಲ್ಲಿ ಅಂತಾರಾಷ್ಟ್ರೀಯ ವಿಮಾನಗಳಲ್ಲಿ ಸಂಚರಿಸಿರುವ ಎಲ್ಲರೂ ಪರೀಕ್ಷೆಗೆ ಒಳಗಾಗಬೇಕು.
– ಸೋಂಕು ದೃಢಪಟ್ಟವರೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳೂ ಪರೀಕ್ಷೆಗೊಳಗಾಗಬೇಕು.
– ರೋಗಿಗಳ ಪರೀಕ್ಷೆ ನಡೆಸಿರುವಂಥ ವೈದ್ಯಕೀಯ ಸಿಬಂದಿಯಲ್ಲಿ ರೋಗಲಕ್ಷಣ ಕಂಡುಬಂದರೆ ಅವರೂ ರಕ್ತ ಮತ್ತು ಗಂಟಲಿನ ದ್ರವವನ್ನು ಪರೀಕ್ಷೆಗೆ ನೀಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.