UP ಅಂಬೇಡ್ಕರ್ ಪ್ರತಿಮೆ: ನೀಲಿಯಿಂದ ಕೇಸರಿ, ಮತ್ತೆ ನೀಲಿ ಬಣ್ಣಕ್ಕೆ
Team Udayavani, Apr 10, 2018, 12:35 PM IST
ಲಕ್ನೋ : ಉತ್ತರ ಪ್ರದೇಶದ ಬದಾವೂ ನಲ್ಲಿ ನೀಲಿ ಬಣ್ಣ ಹೊಂದಿದ್ದ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ ಬಳಿಕ ಸ್ಥಳೀಯಾಡಳಿತೆ ಅದನ್ನು ಬದಲಾಯಿಸಿತ್ತು. ಆದರೆ ಹೊಸ ಪ್ರತಿಮೆ ಕೇಸರಿ ಬಣ್ಣದಲ್ಲಿ ಕಂಗೊಳಿಸುತ್ತಿತ್ತು. ಇದನ್ನು ಸಹಿಸದ ಬಿಎಸ್‌ಪಿ ನಾಯಕ ಹಿಮೇಂದ್ರ ಗೌತಮ್ ಅವರು ಅಂಬೇಡ್ಕರ್ ಪ್ರತಿಮೆಗೆ ಮೊದಲಿನಂತೆ ನೀಲಿ ಬಣ್ಣವನ್ನು ಕೊಡಿಸಿದರು !
ಬಿಎಸ್‌ಪಿ ನಾಯಕನ ಉಸ್ತುವಾರಿಯಲ್ಲಿ ಪ್ರತಿಮೆಯ ರೀ-ಪೇಂಟಿಂಗ್ ನಡೆಯುತ್ತಿರುವ ವಿಡಿಯೋ ಚಿತ್ರಿಕೆಯನ್ನು ಎಎನ್‌ಐ ಸುದ್ದಿ ಸಂಸ್ಥೆ ಬಿಡುಗಡೆ ಮಾಡಿದೆ.
#WATCH Badaun: The damaged statue of BR Ambedkar which was rebuilt and painted saffron, re-painted blue by BSP Leader Himendra Gautam. pic.twitter.com/Tntf7shNAN
— ANI UP (@ANINewsUP) April 10, 2018
ಬದಾವೂ ನ ಕನ್ವರ್‌ಗಾಂವ್ ಪ್ರದೇಶದಲ್ಲಿನ ದುಗ್ರಯಾ ಗ್ರಾಮದಲ್ಲಿರುವ ಅಂಬೇಡ್ಕರ್ ಪ್ರತಿಮೆಯನ್ನು ಕಳೆದ ಎ.7ರಂದು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೈದಿದ್ದರು. ಇದರಿಂದ ತೀವ್ರ ಪ್ರತಿಭಟನೆ ವ್ಯಕ್ತವಾದಾಗ ಸ್ಥಳೀಯಾಡಳಿತೆಯು ಹೊಸ ಪ್ರತಿಮೆಯನ್ನು ಅವಸರದಲ್ಲಿ ಆಗ್ರಾದಿಂದ ತರಿಸಿಕೊಂಡು ಸ್ಥಾಪಿಸಿತ್ತು. ಆಗ ಅದರ ಬಣ್ಣ ಕೇಸರಿಯಾಗಿತ್ತು.
ಇದರಲ್ಲಿ ಬಿಜೆಪಿಯ ಕೈವಾಡವೇನೂ ಇಲ್ಲವೆಂದು ಪಕ್ಷವು ಸ್ಪಷ್ಟಪಡಿಸಿತ್ತು. ಆದರೆ ಕೇಸರಿ ಬಣ್ಣ ಸಹಿಸದ ಬಿಎಸ್‌ಪಿ ನಾಯಕ ಇದೀಗ ಪ್ರತಿಮೆಗೆ ನೀಲಿ ಬಣ್ಣ ಕೊಡಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.