ಕೇರಳದಲ್ಲಿ ಉದ್ದದ ಫ್ಲೈ ಓವರ್ ನಿರ್ಮಾಣ
Team Udayavani, Dec 16, 2022, 7:50 AM IST
ತಿರುವನಂತಪುರ: ಕೇರಳದ ಅರೂರ್ನಿಂದ ತುರವೂರ್ ತೆಕ್ಕುವರೆಗೆ 13 ಕಿಮೀ ಉದ್ದದ ಫ್ಲೈಓವರ್ ನಿರ್ಮಾಣ ಮಾಡಲಾಗುತ್ತದೆ. ಕಾಮಗಾರಿ ಮುಕ್ತಾಯದ ಬಳಿಕ ಅದು ದೇಶದಲ್ಲಿಯೇ ಅತ್ಯಂತ ಉದ್ದದ ಫ್ಲೈ ಓವರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ತಿರುವನಂತಪುರದಲ್ಲಿ 45,536 ಕೋಟಿ ರೂ. ಮೌಲ್ಯದ ಯೋಜನೆಗಳ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, 2025ರ ಒಳಗಾಗಿ ಕೇರಳವೊಂದರಲ್ಲಿಯೇ 3 ಲಕ್ಷ ಕೋಟಿ ರೂ. ಹೆದ್ದಾರಿ ಕಾಮಗಾರಿ ಗಳಿಗಾಗಿ ವೆಚ್ಚ ಮಾಡಲಿದೆ. ಕೇರಳ ಸೇರಿದಂತೆ ದಕ್ಷಿಣ ಭಾರತ ರಾಜ್ಯಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟ ಇರುವ ಹೆದ್ದಾರಿ ನಿರ್ಮಾಣದ ಗುರಿ ಹಾಕಿ ಕೊಂಡಿದೆ ಎಂದರು.
ತಮಿಳುನಾಡು ಮತ್ತು ಕರ್ನಾಟಕ ನಡುವೆ ಸಂಪರ್ಕವನ್ನು ಇನ್ನಷ್ಟು ಉತ್ತಮಗೊಳಿಸಲು ನೆರವಾಗಲಿದೆ ಎಂದು ಸಚಿವ ಗಡ್ಕರಿ ಹೇಳಿದರು. ಈ ಹೆದ್ದಾರಿಯಿಂದಾಗಿ ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ಮಲಪ್ಪುರಂ, ಪಾಲಕ್ಕಾಡ್, ತೃಶೂರ್, ಎರ್ನಾಕುಳಂ, ಆಲಪ್ಪುಳ, ಕೊಲ್ಲಂ ಮತ್ತು ತಿರುವ ನಂತಪುರ ಜಿಲ್ಲೆಗಳ ಆರ್ಥಿಕಾಭಿವೃದ್ಧಿ ವೃದ್ಧಿಯಾಗಲಿದೆ ಎಂದರು.
ಕೈಗಾರಿಕಾ ಕಾರಿಡಾರ್: ಒಟ್ಟು 919 ಕಿಮೀ ಉದ್ದದ ಕೈಗಾರಿಕಾ ಕಾರಿಡಾರ್ ಕೇರಳದ ಮೂಲಕ ಹಾದುಹೋಗಲಿದೆ ಎಂದು ಹೇಳಿದ ಸಚಿವ ಗಡ್ಕರಿ, ಬೆಂಗಳೂರಿನಿಂದ ಮಲಪ್ಪುರಂ ನಡುವಿನ 323 ಕಿಮೀ ದೂರದ ಪೈಕಿ 73 ಕಿಮೀ ಕೇರಳದಲ್ಲಿ ನಿರ್ಮಾಣವಾಗಲಿದೆ. ಅದಕ್ಕಾಗಿ 7,314 ಕೋಟಿ ರೂ. ವೆಚ್ಚ ವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.