ವಿಷಾನಿಲ ಸೋರಿಕೆ: ಮಗು ಸೇರಿದಂತೆ ಐವರು ಸಾವು: 200ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು
Team Udayavani, May 7, 2020, 8:47 AM IST
ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಬಹುರಾಷ್ಟ್ರೀಯ ಸಂಸ್ಥೆಯ ರಾಸಾಯನಿಕ ಸ್ಥಾವರದಿಂದ ವಿಷಕಾರಿ ಅನಿಲ ಸೋರಿಕೆಯಾದ ಪರಿಣಾಮವಾಗಿ ಮಗು ಸೇರಿದಂತೆ ಐವರು ಸಾವನ್ನಪ್ಪಿ, ಸುಮಾರು 200 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್ ಡಿಟಿವಿ ವರದಿ ತಿಳಿಸಿದೆ.
ಸುಮಾರು 1 ಸಾವಿರಕ್ಕೂ ಅಧೀಕ ಮಂದಿ ಅಸ್ವಸ್ಥರಾಗಿದ್ದು ಸ್ಥಳಕ್ಕೆ ಪೊಲೀಸರು, ಆಂಬ್ಯುಲೆನ್ಸ್‌ಗಳು, ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದಾರೆ ಎಂದು ವರದಿ ತಿಳಿಸಿದೆ.
ಇಂದು ಮುಂಜಾನೆ ಸುಮಾರು 3 ಗಂಟೆ ಗೆ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ ಹರಡಿದೆ. ಪರಿಣಾಮವಾಗಿ ಹಲವು ಜನರಿಗೆ ಉಸಿರಾಟದ ಸಮಸ್ಯೆ ಎದುರಾಗಿದೆ. ಮಾತ್ರವಲ್ಲದೆ ಕಣ್ಣು ಸುಡುವ ಅನುಭವವೂ ಆಗಿದ. ಹಲವು ಮಂದಿ ವಿಷಾನಿಲವನ್ನು ಉಸಿರಾಡಿ ಕೂಡಲೇ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.
“ಗೋಪಾಲಪಟ್ಟಣದ ಸಮೀಪದಲ್ಲಿ ಅನಿಲ ಸೋರಿಕೆಯಾಗಿದ್ದು, ಮುನ್ನೆಚ್ಚರಿಕೆಗಳಿಗಾಗಿ ಈ ಸ್ಥಳಗಳಲ್ಲಿ ವಾಸವಿರುವವರು ಮನೆಗಳಿಂದ ಹೊರಬರದಂತೆ ವಿನಂತಿಸುತ್ತಿಸುತ್ತೇವೆ ಎಂದು ವಿಶಾಖಪಟ್ಟಣಂ ಮಹಾನಗರ ಪಾಲಿಕೆ ಟ್ವೀಟ್ ಮಾಡಿದೆ.
ನೆಲದ ಮೇಲೆಯೇ ಹಲವಾರು ಜನರು ಪ್ರಜ್ಞಾಹೀನರಾಗಿ ಬಿದ್ದಿದ್ದು ಪ್ರಕರಣ ಹೆಚ್ಚು ಗಂಭೀರದಿಂದ ಕೂಡಿದ್ದು ಸಾವುನೋವುಗಳು ಹೆಚ್ಚಾಗುವ ಸಾಧ್ಯತೆಯೂ ಇದೆ ಎಂದು ವರದಿ ತಿಳಿಸಿದೆ. .ಕಾರ್ಖಾನೆಯಿಂದ ವಿಷಾನಿಲ ಸೋರಿಕೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
1961ರಲ್ಲಿ ಹಿಂದೂಸ್ತಾನ್ ಪಾಲಿಮರ್ಸ್ ಎಂದು ಸ್ಥಾಪಿಸಲ್ಪಟ್ಟ ಈ ಕಂಪನಿಯನ್ನು, ನಂತರದಲ್ಲಿ ದಕ್ಷಿಣ ಕೊರಿಯಾದ ಎಲ್ ಜಿ ಕೆಮ್ ಎಂಬ ಸಂಸ್ಥೆ ನಡೆಸಿಕೊಂಡು ಬರುತ್ತಿದ್ದು 1997 ರಲ್ಲಿ ಎಲ್ ಜಿ ಪಾಲಿಮರ್ಸ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು. ಇಲ್ಲಿ ಆಟಿಕೆಗಳು ಮತ್ತು ವಿವಿಧ ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ತಯಾರಿಸಲಾಗುತ್ತಿತ್ತು,
Andhra Pradesh: Chemical gas leakage reported at LG Polymers industry in
RR Venkatapuram village, Visakhapatnam. People being taken to hospital after they complained of burning sensation in eyes&breathing difficulties. Police, fire tenders, ambulances reach spot.Details awaited. pic.twitter.com/uCXGsHBmn2— ANI (@ANI) May 7, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.